ಹಾಸನ: ಜಿಲ್ಲೆಯಲ್ಲಿ ಇಂದು ಒಂದೇ ದಿನ 142 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಭಾನುವಾರ ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-5, ಬೇಲೂರು-1, ಹಾಸನ-48, ಅರಸೀಕೆರೆ-12, ಚನ್ನರಾಯಪಟ್ಟಣ-29, ಅರಕಲಗೂಡು-23, ಹೊಳೆನರಸೀಪುರ-22, ಸಕಲೇಶಪುರ-2 ಸೇರಿ ಒಟ್ಟು 142 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2417 ಕ್ಕೆ ಏರಿಕೆಯಾಗಿದೆ.
ಇಂದು 35 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 1057 ಮಂದಿ ಬಿಡುಗಡೆಯಾಗಿದ್ದಾರೆ. ಹಾಗೆಯೇ 1295 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 65 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದರು.
ಕೊರೊನಾ ಉಲ್ಬಣವಾಗುತ್ತಿರುವ ಹಿನ್ನಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡುವ ಮೂಲಕ ಕೊರೊನಾ ಸೋಂಕನ್ನು ತಡೆಗಟ್ಟುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.
ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 94.
2. ಅರಕಲಗೂಡು 171.
3. ಅರಸೀಕೆರೆ 407.
4. ಬೆಲೂರು 158.
5. ಚನ್ನರಾಯಪಟ್ಟಣ 426.
6. ಹಾಸನ 833.
7. ಹೊಳೆನರಸೀಪುರ 234.
8. ಸಕಲೇಶಪುರ 81.
9. ಇತರ 13 ಪ್ರಕರಣಗಳು
ಈವರೆಗೆ ವರದಿಯಾಗಿದ್ದು, ಒಟ್ಟು 2417 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.