ಅರಕಲಗೂಡು: ಹೊ.ನ.ಪುರ ರಸ್ತೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಸೋಂಕು ದೃಢಪಟ್ಟಿದ್ದು, ಪೆಟ್ರೋಲ್ ಬಂಕ್ ಅನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.
ಹೌದು ಜಿಲ್ಲೆಯಲ್ಲಿ ಕೊರೊನಾ ಭೀತಿ ದಿನೇ-ದಿನೆ ಹೆಚ್ಚಾಗುತ್ತಿದೆ. ಸದ್ಯ ಹೊ.ನ.ಪುರ ರಸ್ತೆಯ ಶ್ರೀದೇವಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ಸೋಂಕು ಹರಡುವ ಭೀತಿಯಿದ್ದು, ಪೆಟ್ರೋಲ್ ಬಂಕ್ ಅನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಈ ಪ್ರಕರಣದಿಂದಾಗಿ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.