ETV Bharat / state

ಕೊರೊನಾ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸನ್ನದ್ಧ: ಹಾಸನ ಜಿಲ್ಲಾಧಿಕಾರಿ - ಆರ್. ಗಿರೀಶ್, ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿರುವ ಎಲ್ಲಾ 52 ಖಾಸಗಿ ನರ್ಸಿಂಗ್ ಹೋಂಗಳು ಕನಿಷ್ಠ ಕೊರೊನಾ ಮಹಾಮಾರಿ ತೊಲಗುವವರೆಗಾದರೂ ಸುವರ್ಣ ಆರೋಗ್ಯ ಟ್ರಸ್ಟ್​ನಲ್ಲಿ ನೋಂದಾಯಿಸಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್​.ಗಿರೀಶ್ ಕೋರಿದರು.

Corona infection
ಕೊರೊನಾ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸನ್ನದ್ದ: ಡಿಸಿ
author img

By

Published : Apr 2, 2020, 5:16 PM IST

ಹಾಸನ : ಕೊರೊನಾ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸಾ ಸನ್ನದ್ಧತೆ ಕುರಿತಂತೆ ಜಿಲ್ಲಾಧಿಕಾರಿ ಆರ್​. ಗಿರೀಶ್ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಹಾಗೂ ವೈದ್ಯರೊಂದಿಗೆ ಸಭೆ ನಡೆಸಿ ಸಂಪೂರ್ಣ ಸಹಕಾರ ಕೋರಿದರು.

ಇದೊಂದು ಆರೋಗ್ಯ ತುರ್ತು ಪರಿಸ್ಥಿತಿ. ಎಲ್ಲರೂ ಒಂದಾಗಿ ಹೋರಾಟ ನಡೆಸಬೇಕಿದೆ. ಇದಕ್ಕೆ ಎಲ್ಲಾ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಸಹಕಾರ ಅತೀ ಅಮೂಲ್ಯ ಎಂದು ಕರೆ ನೀಡಿದರು.

ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಹಾಗಾಗಿ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಒ.ಪಿ.ಡಿ ಪ್ರಾರಂಭಿಸಬೇಕು. ಹೊರ ರೋಗಿಗಳ ತಪಾಸಣೆ ಪ್ರಾರಂಭವಾಗಬೇಕು. ಜಿಲ್ಲೆಯಲ್ಲಿರುವ ಎಲ್ಲಾ 52 ಖಾಸಗಿ ನರ್ಸಿಂಗ್ ಹೋಂಗಳು ಕನಿಷ್ಠ ಕೊರೊನಾ ಮಹಾಮಾರಿ ತೊಲಗುವವರೆಗಾದರೂ ಸುವರ್ಣ ಆರೋಗ್ಯ ಟ್ರಸ್ಟ್​ನಲ್ಲಿ ನೋಂದಾಯಿಸಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಕೋರಿದರು.

ನಗರದ ತಣ್ಣೀರುಹಳ್ಳದಲ್ಲಿರುವ ಧರ್ಮಸ್ಥಳ ಮಂಜುನಾಥ ಸ್ವಾಮಿ ಆಯುರ್ವೇದ ಆಸ್ಪತ್ರೆಯನ್ನು ಅಗತ್ಯಬಿದ್ದರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಕಾಯ್ದಿರಿಸಿಕೊಳ್ಳಲಾಗಿದೆ. ಇದೇ ರೀತಿ ಖಾಸಗಿ ಆಸ್ಪತ್ರೆಗಳ ಅಗತ್ಯ ಕೂಡ ಬರಬಹುದು, ಆಗ ಜಿಲ್ಲಾಡಳಿತಕ್ಕೆ ಬಿಟ್ಟು ಕೊಡಲು ಅಥವಾ ಖಾಸಗಿ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಸಿದ್ದರಿರಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಎನ್.95 ಮಾಸ್ಕ್ ಹಾಗೂ ಪಿ.ಪಿ.ಕಿಟ್​ಗಳ ಕೊರತೆ ಇದೆ. ಇವು ಮುಂದಿನ ದಿನಗಳಲ್ಲಿ ಪೂರೈಕೆಯಾಗುವ ನಿರೀಕ್ಷೆ ಇದೆ. ಸದ್ಯಕ್ಕೆ ಲಭ್ಯ ಇರುವ ತ್ರಿಪಲ್ ಲೇಯರ್ ಮಾಸ್ಕ್​ಗಳನ್ನು ಖಾಸಗಿ ಅಸ್ಪತ್ರೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ನೀಡಲಾಗುವುದು. ಎಲ್ಲಾ ವೈದ್ಯರು ಅವುಗಳನ್ನು ಹಾಕಿಯೇ ತಪಾಸಣೆ ನಡೆಸಬೇಕು ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.