ಹಾಸನ: ಜಿಲ್ಲೆಯಲ್ಲಿಂದು 26 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 11 ಜನರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ-20, ಅರಸೀಕೆರೆ-4, ಹೊಳೆನರಸೀಪುರ-2, ಸೇರಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 568ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 281 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 276 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಕೊರೊನಾಗೆ 11 ಜನ ಬಲಿಯಾಗಿದ್ದಾರೆ.
ಕಳೆದ ಒಂದು ವಾರದಿಂದ ದಿನಕ್ಕೊಂದು ಸಾವು ಸಂಭವಿಸುತ್ತಿದೆ. ಡೆಡ್ಲಿ ವೈರಸ್ಗೆ ಹೊಳೆನರಸೀಪುರ ತಾಲೂಕಿನ 47 ವರ್ಷದ ವ್ಯಕ್ತಿ ಹಾಗೂ ಅರಸೀಕೆರೆ ತಾಲೂಕಿನ 88 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಾಗೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.
ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 20
2. ಅರಕಲಗೂಡು - 21
3. ಅರಸೀಕೆರೆ -66
4. ಬೇಲೂರು - 14
5. ಚನ್ನರಾಯಪಟ್ಟಣ -236
6. ಹಾಸನ - 125
7. ಹೊಳೆನರಸೀಪುರದಲ್ಲಿ - 75
8. ಸಕಲೇಶಪುರ - 6
9. ಇತರ 4 ಪ್ರಕರಣಗಳು ಈವರೆಗೆ ವರದಿಯಾಗಿವೆ.
ಒಟ್ಟು 568 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಮಾಹಿತಿ ನೀಡಿದ್ದಾರೆ.