ಹಾಸನ: ಜಿಲ್ಲೆಯಲ್ಲಿಂದು 65 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಇದುವರೆಗೆ 847 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 846 ಸಕ್ರಿಯ ಪ್ರಕರಣಗಳಿವೆ. 45 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದರು. ಇಂದು ಹಾಸನ 27, ಅರಸೀಕೆರೆ 5, ಹೊಳೆನರಸೀಪುರ 9, ಆಲೂರು 3, ಚನ್ನರಾಯಪಟ್ಟಣ 13, ಸಕಲೇಶಪುರ 3, ಅರಕಲಗೂಡಿನ 4 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,738ಕ್ಕೆ ಏರಿದೆ. ಇಂದು ಒಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 45ಕ್ಕೆ ಏರಿಕೆಯಾಗಿದೆ ಎಂದರು.
ಇನ್ನು, ಕೋವಿಡ್-19 ಉಲ್ಬಣವಾಗುತ್ತಿರುವ ಹಿನ್ನಲೆಯಲ್ಲಿ, ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಶೀತ, ನೆಗಡಿ, ಕೆಮ್ಮಿದ್ದರೆ ಹಿಮ್ಸ್ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ, ಉತ್ತಮ ದರ್ಜೆಯ ಮಾಸ್ಕ್ ಧರಿಸಿ ಹಾಗೂ ಸ್ಯಾನಿಟೈಸರ್ ಬಳಕೆ ಮಾಡಬೇಕು ಮನವಿ ಮಾಡಿದರು.