ಹಾಸನ: ಜಿಲ್ಲೆಯಲ್ಲಿ ಇಂದು 325 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 6,856ಕ್ಕೆ ಏರಿಕೆಯಾಗಿದೆ. ಮೂವರ ಸಾವಿನೊಂದಿಗೆ ಮೃತರ ಸಂಖ್ಯೆ 175 ತಲುಪಿದೆ ಎಂದು ಪ್ರಭಾರಿ ಆರೋಗ್ಯಾಧಿಕಾರಿ ಡಾ. ಕಾಂತರಾಜ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 233 ಜನರು ಸೇರಿ ಈವರೆಗೆ 4,615 ಮಂದಿ ಗುಣಮುಖರಾಗಿದ್ದಾರೆ. 2,066 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 60 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-9, ಅರಕಲಗೂಡು-55, ಅರಸೀಕೆರೆ-10, ಬೇಲೂರು-32, ಚನ್ನರಾಯಪಟ್ಟಣ-35, ಹಾಸನ-142 ಹೊಳೆನರಸೀಪುರ-29, ಸಕಲೇಶಪುರ-13ರಂತೆ ಒಟ್ಟು 325 ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.
ತಾಲೂಕುವಾರು ಕೋವಿಡ್ ಪ್ರಕರಣಗಳು:
- ಆಲೂರು- 201
- ಅರಕಲಗೂಡು- 614
- ಅರಸೀಕೆರೆ- 939
- ಬೆಲೂರು- 542
- ಚನ್ನರಾಯಪಟ್ಟಣ- 923
- ಹಾಸನ- 2771
- ಹೊಳೆನರಸೀಪುರ- 627
- ಸಕಲೇಶಪುರ- 195
ತಾಲೂಕುವಾರು ಪ್ರಕರಣಗಳನ್ನು ಹೊರತುಪಡಿಸಿ ಇತರ 44 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 6856 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಡಾ. ಕಾಂತರಾಜ್ ತಿಳಿಸಿದ್ದಾರೆ.