ETV Bharat / state

ಹಾಸನ ಜಿಲ್ಲೆಯಲ್ಲಿ 127 ಕೋವಿಡ್‌ ದೃಢ; ಸೋಂಕು ತಡೆಗಟ್ಟಲು ಸಹಕರಿಸುವಂತೆ ಆರೋಗ್ಯಾಧಿಕಾರಿ ಮನವಿ - Covid cases

ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಉತ್ತಮ ದರ್ಜೆಯ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಸೋಂಕು ತಡೆಗಟ್ಟುವಲ್ಲಿ ಎಲ್ಲರು ಸಹಕರಿಸಬೇಕೆಂದು ಡಾ. ಸತೀಶ್ ಮನವಿ ಮಾಡಿದರು.

Corona Statistics of Hassan District
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್
author img

By

Published : Sep 7, 2020, 4:41 PM IST

Updated : Sep 7, 2020, 6:53 PM IST

ಹಾಸನ : ಜಿಲ್ಲೆಯಲ್ಲಿ ಇಂದು ಹೊಸದಾಗಿ 127 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 10167ಕ್ಕೆ ಏರಿಕೆಯಾಗಿದೆ. ನಾಲ್ವರ ಸಾವಿನೊಂದಿಗೆ ಮೃತರ ಸಂಖ್ಯೆ ಇದೀಗ 223 ತಲುಪಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಇಂದು ಬಿಡುಗಡೆಯಾದ 349 ಜನರು ಸೇರಿ ಈವರೆಗೆ 6928 ಮಂದಿ ಗುಣಮುಖರಾಗಿದ್ದಾರೆ. 3016 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 53 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-1, ಅರಕಲಗೂಡು-1, ಅರಸೀಕೆರೆ-22, ಬೇಲೂರು-5, ಚನ್ನರಾಯಪಟ್ಟಣ-24, ಹಾಸನ-62, ಹೊಳೆನರಸೀಪುರ-12, ಸಕಲೇಶಪುರ-0, ಇತರೆ-0 ಸೇರಿದಂತೆ ಒಟ್ಟು 127 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಉತ್ತಮ ದರ್ಜೆಯ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರು ಸಹಕರಿಸಬೇಕೆಂದು ಮನವಿ ಮಾಡಿದರು.

ತಾಲೂಕುವಾರು ಕೋವಿಡ್ ಪ್ರಕರಣಗಳು:

  • ಆಲೂರು - 337
  • ಅರಕಲಗೂಡು 966
  • ಅರಸೀಕೆರೆ 1329
  • ಬೆಲೂರು 796
  • ಚನ್ನರಾಯಪಟ್ಟಣ 1288
  • ಹಾಸನ 4239
  • ಹೊಳೆನರಸೀಪುರ 833
  • ಸಕಲೇಶಪುರ 316
  • ಇತರೆ 63 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 10167 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಡಾ. ಸತೀಶ್ ತಿಳಿಸಿದ್ದಾರೆ.

Last Updated : Sep 7, 2020, 6:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.