ಅರಕಲಗೂಡು: ತಾಲೂಕಿನ ಹೆತ್ತಗೌಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕಾಂತಾಮಣಿ ಹಾಗೂ ತಾಲೂಕು ಆರೋಗ್ಯ ನಿರೀಕ್ಷಕ ಚಂದ್ರೇಗೌಡ, ಆಶಾ ಮೇಲ್ವಿಚಾರಕಿ ಕವಿತಾ ಭೇಟಿ ನೀಡಿ ಕೋವಿಡ್-19 ಮುಂಜಾಗ್ರತೆಗಾಗಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದರು.
ಹೋಂ ಕ್ವಾರಂಟೈನ್ ಮಾಡಿರುವವರ ಅನುಸರಣೆ ಬಗ್ಗೆ ಹಾಗೂ ಜ್ವರ ಸಮೀಕ್ಷೆ ಮಾಡಿರುವುದರ ಬಗ್ಗೆ ವಿಚಾರಿಸಿ, ದಾಖಲಾತಿಗಳನ್ನು ಸಮರ್ಪಕವಾಗಿ ಇಡುವಂತೆ ತಿಳಿಸಿದರು.
ಕೋವಿಡ್-19 ಮುಂಜಾಗ್ರತಾ ಕ್ರಮಗಳಾದ ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವ ಬಗ್ಗೆ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಲು ಹಾಗೂ ಆಸ್ಪತ್ರೆಯ ಸಿಬ್ಬಂದಿ ಕೋವಿಡ್-19 ತಡೆಯಲು ಶ್ರಮಿಸಬೇಕೆಂದು ತಿಳಿಸಲಾಯಿತು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ದರ್ಶನ್ ಹಾಗೂ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಇದ್ದರು.