ETV Bharat / state

ಹಾಸನ ಜಿಪಂ ಅಧ್ಯಕ್ಷೆಗೂ ತಗುಲಿದ ಕೊರೊನಾ ಸೋಂಕು - hassan district panchayath president Shweta Devaraj

ಹಾಸನ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಹಾಸನದ ಮನೆಯಲ್ಲಿ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ.

 Shweta Devaraj
Shweta Devaraj
author img

By

Published : Sep 18, 2020, 1:35 PM IST

ಹಾಸನ: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಹಾಸನ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಅವರಿಗೆ ಸಹ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಎರಡು ದಿನಗಳ ಹಿಂದೆ ತಲೆನೋವು ಕಂಡು ಬಂದ ಕಾರಣ ಕೊರೊನಾ ಪರೀಕ್ಷೆ ಮಾಡಿಸಿದ್ದು, ವರದಿ ಪಾಸಿಟಿವ್ ಬಂದಿದೆ. ರೋಗದ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಹಾಸನದ ಮನೆಯಲ್ಲಿ ಹೋಂ ಕ್ವಾರಂಟೈನ್​​ನಲ್ಲಿದ್ದೇನೆ‌ ಎಂದು ತಿಳಿಸಿದ್ದಾರೆ.

ನಾನು ಆರೋಗ್ಯವಾಗಿದ್ದೇನೆ. ಎಲ್ಲರೂ ಕೊರೊನಾ ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದಿರುವ ಅವರು, ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಕ್ವಾರಂಟೈನ್‍ನಲ್ಲಿದ್ದು ಮುಂಜಾಗ್ರತಾ ಕ್ರಮ ಅನುಸರಿಸಿ ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೆ ಜೆಡಿಎಸ್ ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹೊಳೆನರಸೀಪುರ ಶಾಸಕ ಹೆಚ್‍.ಡಿ.ರೇವಣ್ಣ, ಬೇಲೂರು ಶಾಸಕ ಲಿಂಗೇಶ್ ಹಾಗೂ ಹಾಸನ ಜಿಲ್ಲಾ ಉಸ್ತವಾರಿ ಸಚಿವ ಗೋಪಾಲಯ್ಯ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.