ಹಾಸನ: ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಎರಡು ತಿಂಗಳ ಪಡಿತರ ವಿತರಣೆ ಮಾಡಲು ಆದೇಶಿಸಿದ್ದು, ಜಿಲ್ಲೆಯ ಕೆಲವು ನ್ಯಾಯಬೆಲೆ ಅಂಗಡಿ ಮಾಲೀಕರು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಜಿಲ್ಲೆಯ10 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡಲಾಗಿದೆ.
![order copy](https://etvbharatimages.akamaized.net/etvbharat/prod-images/6838291_thumb.jpg)
ಲಾಕ್ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್-ಮೇ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ವಿತರಣೆ ಮಾಡಲು ಸರ್ಕಾರ ಆದೇಶಿಸಿದೆ. ಆದರೆ ಜಿಲ್ಲೆಯ ಕೆಲವು ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ಚೀಟಿದಾರರಿಂದ ಉಚಿತ ಪಡಿತರ ವಿತರಣೆಗೂ ಹಣ ಪಡೆಯುವುದು, ಕಡಿಮೆ ತೂಕ ನೀಡುವುದು, ಇತರೆ ವಸ್ತುಗಳನ್ನು ನೀಡಿ ಹೆಚ್ಚು ಹಣ ಪಡೆಯುತ್ತಿರುವುದು ಹಾಗೂ ಅನುಚಿತವಾಗಿ ವರ್ತಿಸುತ್ತಿರುವ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೆಳಕಂಡ ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡಲಾಗಿದೆ.
ಹಾಸನ ನಗರ 4, ಹಾಸನ ತಾಲೂಕು 2, ಚನ್ನರಾಯಪಟ್ಟಣ 3 ಹಾಗೂ ಅರಸೀಕೆರೆ 1 ನ್ಯಾಯಬೆಲೆ ಅಂಗಡಿ ಸೇರಿದಂತೆ ಒಟ್ಟು 10 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕಿ ಸವಿತಾ ತಿಳಿಸಿದ್ದಾರೆ.