ETV Bharat / state

ಹಾಸನದಲ್ಲಿಂದು 15 ಜನರಿಗೆ ಕೋವಿಡ್ : ಸೋಂಕಿತರ ಸಂಖ್ಯೆ 172ಕ್ಕೆ ಏರಿಕೆ - Hassan Corona News

ಹಾಸನ ಜಿಲ್ಲೆಯಲ್ಲಿ ನಿನ್ನೆ 15 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 172ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

Covid 19 to 15 members in Hassan: cases raised to 172
ಹಾಸನದಲ್ಲಿಂದು 15 ಜನರಿಗೆ ಕೋವಿಡ್ 19​ : ಸೋಂಕಿತರ ಸಂಖ್ಯೆ 172ಕ್ಕೆ ಏರಿಕೆ
author img

By

Published : Jun 1, 2020, 6:19 PM IST

ಹಾಸನ: ಜಿಲ್ಲೆಯಲ್ಲಿ ನಿನ್ನೆ 15 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 172ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಹಾಸನದಲ್ಲಿಂದು 15 ಜನರಿಗೆ ಕೋವಿಡ್ 19​ : ಸೋಂಕಿತರ ಸಂಖ್ಯೆ 172ಕ್ಕೆ ಏರಿಕೆ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ತೆಯಾದ ಎಲ್ಲ ಸೋಂಕಿತರೂ ಚನ್ನರಾಯಪಟ್ಟಣ ತಾಲೂಕಿಗೆ ಸೇರಿದವರಾಗಿದ್ದಾರೆ. ಇಂದು 7 ಜನರು ಸೇರಿ ಇದುವರೆಗೂ 15 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಅವರೆಲ್ಲರನ್ನು ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದರು.

ಈವರೆಗೂ ಹೊರರಾಜ್ಯದಿಂದ ಜಿಲ್ಲೆಗೆ 2,424 ಜನ ಮರಳಿದ್ದಾರೆ. ಅವರಲ್ಲಿ 1,524 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಹಾಗೆ ಬಂದವರನ್ನು 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮಾಡಿ ನಂತರ ಅವರನ್ನು ಸರ್ಕಾರದ ಹೊಸ ಮಾರ್ಗಸೂಚಿಯ ಆದೇಶದಂತೆ ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗುತ್ತದೆ ಎಂದರು.

ಈಗಾಗಲೇ 900 ಜನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದು, ಅವರನ್ನು 7 ದಿನಗಳು ಪೂರ್ಣಗೊಂಡ ನಂತರ ಹೋಂ ಕ್ವಾರಂಟೈನ್​ಗೆ ಕಳುಹಿಸಲಾಗುತ್ತದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.