ETV Bharat / state

ಸಿಲಿಂಡರ್ ಸ್ಫೋಟ: ಭಾಗಶಃ ಮನೆ ಸುಟ್ಟು ಕರಕಲು

ಸಕಲೇಶಪುರದ ಮನಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಭಾಗಶಃ ಸುಟ್ಟು ಹೋಗಿದೆ.

cylinder blast in hassan
ಸಕಲೇಶಪುರದಲ್ಲಿ ಸಿಲಿಂಡರ್ ಸ್ಫೋಟ
author img

By

Published : Feb 2, 2020, 4:07 AM IST

ಹಾಸನ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಭಾಗಶಃ ಸುಟ್ಟು ಹೋಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ಸಕಲೇಶಪುರದಲ್ಲಿ ಸಿಲಿಂಡರ್ ಸ್ಫೋಟ

ಸಕಲೇಶಪುರ ಪಟ್ಟಣದ ವಿನೋಬಾ ರಸ್ತೆಯಲ್ಲಿನ ರಾಮ ಎಂಬವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ರಾಮು ಎಂದಿನಂತೆ ಪೂರಿಗಳನ್ನು ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಭಾಗಶಃ ಮನೆಯ ಸುಟ್ಟು ಕರಕಲಾಗಿದೆ.

ಬೆಂಕಿಯ ಕೆನ್ನಾಲಿಗೆ ಮನೆಯ ತುಂಬೆಲ್ಲ ಹರಡಿದ್ದರಿಂದ ಪಕ್ಕದಲ್ಲಿದ್ದ ಗ್ಯಾರೇಜ್ ಮಾಲೀಕ ಇಮ್ರಾನ್, ಮನೆಯ ಬಾಗಿಲನ್ನು ಒಡೆದು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದು, ತಕ್ಷಣ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆ ಸಂಬಂಧ ಸಕಲೇಶಪುರ ಗ್ರಾಮಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.