ETV Bharat / state

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಪ್ರತಿಭಟನೆ - ಎಸ್ಸಿ ಮತ್ತು ಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆ

ಎಸ್ಸಿ ಮತ್ತು ಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್‌)ಗೆ ಸಮಗ್ರ ತಿದ್ದುಪಡಿ ತರುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹಾಸನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಪ್ರತಿಭಟನೆ
author img

By

Published : Sep 26, 2019, 1:34 PM IST

ಹಾಸನ: ಎಸ್ಸಿ ಮತ್ತು ಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್‌) ಸಮಗ್ರ ತಿದ್ದುಪಡಿ ತರುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ರ್ಯಾಲಿ, ಎನ್ ಆರ್ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ, ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಸಾಗಿತು. ಭೂ ಪರಭಾರೆ ನಿಷೇಧ ಕಾಯ್ದೆಗೆ ಸಮಗ್ರ ತಿದ್ದುಪಡಿ ತರುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಕುರಿತು ಮಾತನಾಡಿದ ಆರ್‌ಪಿಐ ರಾಜ್ಯ ಘಟಕದ ಅಧ್ಯಕ್ಷ ವೆಂಕಟಸ್ವಾಮಿ, ದೇಶದ ಒಟ್ಟು ಜನಸಂಖ್ಯೆಯ ಶೇಕಡಾ 15ರಷ್ಟು ಇರುವ ದಲಿತರು, ಬಲಾಢ್ಯರ ದರ್ಪ ದೌರ್ಜನ್ಯದ ಮೂಲಕ ಶಿಕ್ಷಣ, ಭೂಮಿ, ವಸತಿ, ಹೀಗೆ ಬಹುಮುಖ್ಯ ಸಂಪನ್ಮೂಲಗಳಿಂದ ವಂಚಿತರಾಗುತ್ತಿದ್ದಾರೆ. ಪಿಟಿಸಿಎಲ್‌ಗೆ ಸಮಗ್ರ ತಿದ್ದುಪಡಿ ತರಲು ರಾಜ್ಯ ಸರ್ಕಾರ ಕೂಡಲೇ ಕಾರ್ಯೋನ್ಮುಖವಾಗಬೇಕು ಎಂದರು.

Intro:ಹಾಸನ : ಎಸ್ಸಿ ಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆಗೆ ಸಮಗ್ರ ತಿದ್ದುಪಡಿ ತರುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಲಾಯಿತು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ರ್ಯಾಲಿಯೂ ಎನ್ ಆರ್ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ, ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಜಾಥ ನಡೆಸಿ ಮಾತನಾಡಿ, ಭೂ ಪರಭಾರೆ ನಿಷೇಧ ಕಾಯ್ದೆಗೆ ಸಮಗ್ರ ತಿದ್ದುಪಡಿ ತರುವಂತೆ ತಮ್ಮ ಭಾಷಣದ ಮೂಲಕ ಒತ್ತಾಯಿಸಿದರು.

ದೇಶದ ಒಟ್ಟು ಜನಸಂಖ್ಯೆಯ ಶೇಕಡಾ 15ರಷ್ಟು ಇರುವ ದಲಿತರು ಬಲಾಢ್ಯರು ದರ್ಪ ದೌರ್ಜನ್ಯದ ಮೂಲಕ ಶಿಕ್ಷಣ, ಭೂಮಿ, ವಸತಿ, ಆರೋಗ್ಯವಂತ ಬಹುಮುಖ್ಯ ಸಂಪನ್ಮೂಲಗಳಿಂದ ದೂರಸರಿಸಲ್ಪಟ್ಟಿದ್ದಾರೆ, ಕಾಯ್ದೆಗೆ ಸಮಗ್ರ ತಿದ್ದುಪಡಿ ತರಲು ರಾಜ್ಯ ಸರ್ಕಾರ ಕೂಡಲೇ ಕಾರ್ಯೋನ್ಮುಖವಾಗಬೇಕು ಭೂಮಿ ನಮ್ಮ ಹಕ್ಕು ಅದನ್ನು ರಕ್ಷಿಸಿಕೊಳ್ಳಲು ಪಿಟಿಸಿಎಲ್ ಕಾಯ್ದೆಯನ್ನು ರಕ್ಷಿಸಲು ಒಳಪಡಿಸಬೇಕೆಂದರು.

ಬೈಟ್ 1 : ವೆಂಕಟಸ್ವಾಮಿ, ಆರ್‌ಪಿಐ ರಾಜ್ಯ ಘಟಕದ ಅಧ್ಯಕ್ಷ .

ಪ್ರತಿಭಟನೆಯಲ್ಲಿ ಸತೀಶ್, ಸೋಮಶೇಖರ್, ಈಶ್ವರಪ್ಪ, ವಿಜಯಕುಮಾರ್, ಪ್ರಕಾಶ್ ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.

Body:0

Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.