ETV Bharat / state

ಹಾಸನದಲ್ಲಿ ಮೇ 12ರವರೆಗೆ ಲಾಕ್​ಡೌನ್​.. ಆದರೆ, ವ್ಯಾಪಾರ, ವಹಿವಾಟಿಗೆ ಅನುಮತಿ.. - hassan latest lackdown news

ಲಾಕ್‌ಡೌನ್ ಅವದಿಯಲ್ಲಿನ ಸಾರ್ವಜನಿಕರ ಕಷ್ಟಗಳನ್ನು ತಗ್ಗಿಸಲು ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ಆದೇಶ ಮಾರ್ಗಸೂಚಿಯಂತೆ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

dc-girish
ಜಿಲ್ಲಾಧಿಕಾರಿ ಆರ್. ಗಿರೀಶ್
author img

By

Published : May 5, 2020, 8:52 PM IST

ಹಾಸನ : ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಮೇ 12ರವರೆಗೆ ಲಾಕ್‌ಡೌನ್ ಮುಂದುವರೆಸಲಾಗಿದೆ. ಆದರೆ, ಎಲ್ಲಾ ರೀತಿಯ ಅನುಮೋದಿತ ವ್ಯಾಪಾರ, ವಹಿವಾಟಿಗೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಆರ್‌ ಗಿರೀಶ್ ಆದೇಶ ಹೊರಡಿಸಿದ್ದಾರೆ.

ಲಾಕ್‌ಡೌನ್ ಅವಧಿಯಲ್ಲಿನ ಸಾರ್ವಜನಿಕರ ಕಷ್ಟಗಳನ್ನು ತಗ್ಗಿಸಲು ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿಯಂತೆ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಆರ್. ಗಿರೀಶ್

ಪಾಲಿಸಬೇಕಾದ ನಿಯಮಗಳು : ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳಲ್ಲಿ, ಅಂಗಡಿಗಳಲ್ಲಿ ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಸುವುದು ಕಡ್ಡಾಯ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಹೊರಡಿಸಲಾದ ಮಾರ್ಗಸೂಚಿಗಳ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಕೆಲಸದ ಸ್ಥಳಗಳಲ್ಲಿ, ಸಾರಿಗೆ ಸಂದರ್ಭಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಸ್ಪಷ್ಟ ಸೂಚನೆ ಹೊರಡಿಸಿದ್ದಾರೆ.

ಸಂಸ್ಥೆಗಳು, ವ್ಯವಸ್ಥಾಪಕರು 5 ಅಥವಾ ಹೆಚ್ಚಿನ ವ್ಯಕ್ತಿಗಳು ಸೇರುವಿಕೆಗೆ ಅವಕಾಶ ನೀಡಬಾರದು ಮತ್ತು ಕನಿಷ್ಟ 6 ಅಡಿ ಅಂತರ ಕಾಪಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಪಾನ್ ಬೀಡ, ಗುಟ್ಕಾ ಹಾಗೂ ತಂಬಾಕು ಸೇವನೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕರಿ ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.