ETV Bharat / state

ಕಾಟಚಾರಕ್ಕೆ ಡ್ಯೂಟಿ ಮಾಡುವುದಾದರೇ ಬರಬೇಡಿ: ಡೀನ್​​ಗೆ ಡಿಸಿಎಂ ತರಾಟೆ - dcm ashwathnaraya visits hassan

ದಿನಕ್ಕೊಮ್ಮೆಯಾದರೂ, ಅಗತ್ಯಬಿದ್ದರೆ ಎರಡು ಸಲವಾದರೂ ಸೋಂಕಿತರ ವಾರ್ಡ್‌ಗೆ ಭೇಟಿ ನೀಡಲೇಬೇಕು. ಇಲ್ಲಿ ಏನೇ ಆದರೂ ನೀವೇ ಹೊಣೆಗಾರರು ಎಂದು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್​ಗೆ ಡಿಸಿಎಂ ಎಚ್ಚರಿಕೆ ನೀಡಿದ್ದಾರೆ.

dcm-ashwath-narayan-angry-with-hassan-medical-college-dean
ಕಾಟಚಾರಕ್ಕೆ ಡ್ಯೂಟಿ ಮಾಡುವುದಾದರೇ ಬರಬೇಡಿ: ಡೀನ್​​ಗೆ ಡಿಸಿಎಂ ತರಾಟೆ
author img

By

Published : May 23, 2021, 1:33 AM IST

ಹಾಸನ: ವಾರಕ್ಕೊಮ್ಮೆ ಕೋವಿಡ್‌ ಸೋಂಕಿತರ ವಾರ್ಡ್‌ಗೆ ಕಾಟಾಚಾರಕ್ಕೆ ಭೇಟಿ ಕೊಟ್ಟು ನಿರ್ಲಕ್ಷ್ಯ ಧೋರಣೆ ತಾಳಿದ್ದ ಇಲ್ಲಿನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್‌ ಡಾ.ರವಿಕುಮಾರ್‌ಗೆ ಉಪ ಮುಖ್ಯಮಂತ್ರಿ ಡಾ.ಸಿಎನ್.‌ ಅಶ್ವತ್ಥನಾರಾಯಣ ಅವರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

dcm-ashwath-narayan-angry-with-hassan-medical-college-dean
ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಡಿಸಿಎಂ ಮಾಹಿತಿ ಸಂಗ್ರಹಣೆ

ಹಾಸನದ ವೈದ್ಯಕೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂತು. ಇದರಿಂದ ಕೆಂಡಾಮಂಡಲರಾದ ಡಿಸಿಎಂ, "ನೀವೇ ವಾರಕ್ಕೊಮ್ಮೆ ವಾರ್ಡ್‌ಗೆ ಹೋದರೆ ಇನ್ನು ಇಡೀ ವ್ಯವಸ್ಥೆ ಕಥೆ ಏನು? ಸ್ವತಃ ಡೀನ್‌ ಹೀಗೆ ಮಾಡಿದರೆ ಇತರೆ ವೈದ್ಯರ ಪರಿಸ್ಥಿತಿ ಏನು? ಎಲ್ಲರಿಗಿಂತ ಮೊದಲೇ ವ್ಯಾಕ್ಸಿನ್‌ ತೆಗೆದುಕೊಂಡು ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ನಿಮ್ಮಂಥವರೇ ಹೆದರಿಕೊಂಡು ಸೋಂಕಿತರ ಬಳಿಗೆ ಹೋಗದಿದ್ದರೆ ಆ ಸೋಂಕಿಗೆ ತುತ್ತಾದವರ ಪಾಡೇನು? ಸೋಂಕಿತರಿಗೆ ಮನೋಧೈರ್ಯ ಬರುವುದು ಹೇಗೆ?" ಎಂದು ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: ಕೋವಿಡ್​ನಿಂದ ಮೃತಪಟ್ಟವರ ಖಾಸಗಿ ಅಂತ್ಯಸಂಸ್ಕಾರಕ್ಕೆ ದೃಢೀಕರಣ ಪತ್ರ ಕಡ್ಡಾಯ

ಇನ್ನು ಮುಂದೆ ಹೀಗೆ ಆಗುವಂತಿಲ್ಲ. ದಿನಕ್ಕೊಮ್ಮೆಯಾದರೂ, ಅಗತ್ಯಬಿದ್ದರೆ ಎರಡು ಸಲವಾದರೂ ಸೋಂಕಿತರ ವಾರ್ಡ್‌ಗೆ ಭೇಟಿ ನೀಡಲೇಬೇಕು. ಇಲ್ಲಿ ಏನೇ ಆದರೂ ನೀವೇ ಹೊಣೆಗಾರರು. ಮುಂದೆ ಇಂಥ ನಿರ್ಲಕ್ಷ್ಯ ಮರುಕಳಿಸಿದರೆ ಸುಮ್ಮನಿರುವುದಿಲ್ಲ ಎಂದು ಡಿಸಿಎಂ ಅವರು ಡೀನ್‌ಗೆ ಖಡಕ್‌ ವಾರ್ನಿಂಗ್‌ ಕೊಟ್ಟರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕರಾದ ಎಚ್.ಡಿ.ರೇವಣ್ಣ, ಶಿವಲಿಂಗೇಗೌಡ, ಪ್ರೀತಂ ಗೌಡ, ಸಿ. ಎನ್. ಬಾಲಕೃಷ್ಣ, ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಗಿರೀಶ್‌, ಎಸ್‌ಪಿ ಶ್ರೀನಿವಾಸ ಗೌಡ ಮುಂತಾದವರು ಡಿಸಿಎಂ ಜತೆಯಲ್ಲಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.