ETV Bharat / state

ವಿಕಲಚೇತನ ಕ್ರೀಡಾಪಟುಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಆಗ್ರಹ - Demand to give Special package for Para athletes

ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ವಿಕಲಚೇತನರಿಗೆ ಮತ್ತು ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಪರಿಹಾರ ಧನ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ವಿಕಲಚೇತನ ಕ್ರೀಡಾಪಟುಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿ ಆರ್. ಗಿರೀಶ್ ರವರಿಗೆ ಮನವಿ ಸಲ್ಲಿಸಲಾಯಿತು.

Hassan
Hassan
author img

By

Published : Jun 20, 2020, 7:55 PM IST

​​​​​​ಹಾಸನ: ಲಾಕ್​​ಡೌನ್​ದಿಂದ ಸಂಕಷ್ಟಕ್ಕೆ ಸಿಲುಕಿರುವ ವಿಕಲಚೇತನ ಮತ್ತು ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಪರಿಹಾರ ಧನ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ವಿಕಲಚೇತನ ಕ್ರೀಡಾಪಟುಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿ ಆರ್. ಗಿರೀಶ್ ರವರಿಗೆ ಮನವಿ ಸಲ್ಲಿಸಲಾಯಿತು.

ಮಹಾಮಾರಿ ಕೊರೊನಾ ಲಾಕ್​ಡೌನ್ ಪರಿಣಾಮ ವಿಕಲಚೇತನ ಹಾಗೂ ಪ್ಯಾರಾಲಂಪಿಕ್ ಕ್ರೀಡಾಪಟುಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹತ್ತರ ಸಾಧನೆಗೈದ ರಾಜ್ಯದ ಪ್ಯಾರಾಲಂಪಿಕ್ ಕ್ರೀಡಾಪಟುಗಳು ಇಂದಿಗೂ ಸಹ ಆರ್ಥಿಕವಾಗಿ ತೀರಾ ಹಿಂದುಳಿದ ಬಡ ಕುಟುಂಬದ ನಿರುದ್ಯೋಗಿ ವ್ಯಕ್ತಿಗಳಾಗಿಯೇ ಉಳಿದಿದ್ದಾರೆ. ಸರ್ಕಾರದ ವತಿಯಿಂದ ದೊರೆಯಬೇಕಾದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುತ್ತಾರೆ ಎಂದು ಸಂಘದ ಸದಸ್ಯರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೃಹತ್ ಮೊತ್ತದ ವಿಶೇಷ ಪ್ಯಾಕೇಜ್‌ಗಳನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಪರಿಹಾರ ಧನ ವಿತರಣೆ ಪಟ್ಟಿಯಲ್ಲಿ ಪ್ಯಾರಾಲಂಪಿಕ್ ಕ್ರೀಡಾಪಟುಗಳ ಹೆಸರನ್ನು ಕೈ ಬಿಟ್ಟಿರುವುದು ದುರಂತದ ಸಂಗತಿಯಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ನಮ್ಮ ವರ್ಗವನ್ನು ನಿರ್ಲಕ್ಷ್ಯಗೊಳಪಡಿಸದೆ ಸಂಕಷ್ಟಕ್ಕೆ ಒಳಗಾದ ವಿಕಲಚೇತನ ಪ್ಯಾರಾ ಕ್ರೀಡಾಪಟುಗಳಿಗೂ ಸಹ ನೆರವಿನ ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು ಕೂಡಲೇ ಘೋಷಿಸುವಂತೆ ಮನವಿ ಮಾಡಿದರು.

ಈ ವೇಳೆ ರಾಜ್ಯ ವಿಕಲಚೇತನ ಕ್ರೀಡಾಪಟುಗಳ ಸಂಘದ ಜಿಲ್ಲಾಧ್ಯಕ್ಷ ಎಸ್. ಅಂಥೋನಪ್ಪ ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.