ETV Bharat / state

ಹಾಸನ: ಶಾಲಾ ಕಾಲೇಜುಗಳಿಗೆ ಅನುದಾನ ಮಂಜೂರು ಮಾಡುವಂತೆ ಒತ್ತಾಯ - Demands to release the school-collage grands in hassan

ರಾಜ್ಯದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಸಹಭಾಗಿತ್ವದಲ್ಲಿ ಶಿಕ್ಷಣ ನೀಡುತ್ತಾ ಬಂದಿವೆ. ಸ್ವಾತಂತ್ರ್ಯ ನಂತರ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುತ್ತಾ ಬಂದರೂ ಅದು 1986 ಕ್ಕೆ ನಿಂತುಹೋಗಿದೆ ಎಂದು ಹಾಸನ ಜಿಲ್ಲಾ ಅನುದಾನ ರಹಿತ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದ ವತಿಯಿಂದ ಆರೋಪಿಸಲಾಯಿತು.

Demands to release the school-collage grands in hassan
ಶಾಲಾ ಕಾಲೇಜುಗಳಿಗೆ ಅನುದಾನ ಮಂಜೂರು ಮಾಡುವಂತೆ ಒತ್ತಾಯ..
author img

By

Published : Sep 21, 2020, 4:53 PM IST

ಹಾಸನ: 1995ರ ನಂತರ ಪ್ರಾರಂಭವಾದ ಶಾಲಾ ಕಾಲೇಜುಗಳಿಗೆ ಅನುದಾನ ಮಂಜೂರು ಮಾಡಲು ಒತ್ತಾಯಿಸಿ ಹಾಸನ ಜಿಲ್ಲಾ ಅನುದಾನ ರಹಿತ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಮನವಿ ಸಲ್ಲಿಸಿದರು.

ಶಾಲಾ ಕಾಲೇಜುಗಳಿಗೆ ಅನುದಾನ ಮಂಜೂರು ಮಾಡುವಂತೆ ಒತ್ತಾಯ.

ರಾಜ್ಯದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಸಹಭಾಗಿತ್ವದಲ್ಲಿ ಶಿಕ್ಷಣ ನೀಡುತ್ತಾ ಬಂದಿವೆ. ಸ್ವಾತಂತ್ರ್ಯ ನಂತರ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುತ್ತಾ ಬಂದರೂ ಅದು 1986 ಕ್ಕೆ ನಿಂತುಹೋಗಿದೆ. ನಂತರ 2006ರಲ್ಲಿ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಬಸವರಾಜ ಹೊರಟ್ಟಿಯವರು 1986 ರಿಂದ 1993 ರವರೆಗೆ ಅನುದಾನ ನೀಡಿದ್ದರು. ನಂತರ 2008ರಲ್ಲಿ ಅಧಿಕಾರಕ್ಕೆ ಬಂದ ಬಿ.ಜೆ.ಪಿ ಸರ್ಕಾರ 1993 ರಿಂದ 1995 ರವರೆಗೆ ನೀಡಿತು. ನಂತರ ಶಾಲೆಗಳಿಗೆ ಅನುದಾನ ನೀಡುವ ಪ್ರಕ್ರಿಯೆ ನಿಂತುಹೋಗಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಈ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ಬಡ ಮಕ್ಕಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಹಾಗೂ ಈ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಬದುಕು ಕೂಡ ಶೋಚನೀಯ ಸ್ಥಿತಿಯಲ್ಲಿದೆ ಎಂದು ಕಳವಳಗೊಂಡ ಪ್ರತಿಭಟನಾಕಾರರು,1995ರ ನಂತರ ಪ್ರಾರಂಭವಾಗಿರುವ ಶಾಲಾ ಕಾಲೇಜುಗಳಿಗೆ ಅನುದಾನವನ್ನು ಕೊಡಿಸುವುದರ ಮೂಲಕ ಕರ್ನಾಟಕದಲ್ಲಿ ನಮ್ಮ ಕನ್ನಡ ಶಾಲೆ ಹಾಗೂ ಕನ್ನಡ ಭಾಷೆ ಉಳಿವಿಗೆ ಒತ್ತು ನೀಡಬೇಕೆಂದು ಕೋರಿ ಮನವಿ ಸಲ್ಲಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.