ETV Bharat / state

ಜಿಲ್ಲೆಯಲ್ಲಿ ಯಾವುದೇ ಕೊರೋನಾ ಸೋಂಕಿತ ಪ್ರಕರಣವಿಲ್ಲ: ಜಿಲ್ಲಾಧಿಕಾರಿ ಆರ್. ಗಿರೀಶ್ ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಕುರಿತು ತಪ್ಪು ಮಾಹಿತಿ ಹರಿದಾಡುತ್ತಿದ್ದು, ಆ ರೀತಿ ಮಾಡುವವರ ವಿರುದ್ಧ ಸೈಬರ್ ಕ್ರೈಂ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಎಚ್ಚರಿಸಿದ್ದಾರೆ.

district-collector-girish
ಜಿಲ್ಲಾಧಿಕಾರಿ ಆರ್. ಗಿರೀಶ್
author img

By

Published : Mar 18, 2020, 3:22 AM IST

ಹಾಸನ: ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ, ಸುಮಾರು 13 ಶಂಕಿತರ ಪರೀಕ್ಷೆ ನಡೆಸಲಾಗಿದ್ದು, ಅವರಲ್ಲಿ ಸೋಂಕು ಇಲ್ಲವೆಂದು ಖಾತರಿಯಾಗಿದೆ. ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆ ಇಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಿದಾಡುತ್ತಿದ್ದು ಆ ರೀತಿ ಮಾಡುವವರ ವಿರುದ್ಧ ಸೈಬರ್ ಕ್ರೈಂ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿ ಆರ್. ಗಿರೀಶ್

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹಾಸನದಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಇಲ್ಲಿಯವರೆಗೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಬಂದ 45 ಸ್ಯಾಂಪಲ್ಸ್‌ಗಳನ್ನು ಪರೀಕ್ಷೆ ನಡೆಸಿದ್ದು, ಸೋಂಕು ಇಲ್ಲವೆಂದು ವರದಿ ಬಂದಿದೆ ಎಂದರು. ಪ್ರಸ್ತುತ 20 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಸ್ಥಾಪನೆಯಾಗಿದ್ದು ಅವಶ್ಯಕತೆ ಇದ್ದಲ್ಲಿ ಅದನ್ನು 300 ಹಾಸಿಗೆಗಳವರೆಗೂ ವಿಸ್ತರಿಸಬಹುದು. ಈಗ ಇಲ್ಲಿ ಯಾವುದೇ ರೋಗಿ ದಾಖಲಾಗಿ ಉಳಿದಿಲ್ಲ ಎಂದರು.

ಸರ್ಕಾರದ ಆದೇಶದಂತೆ ಈಗಾಗಲೇ ಶಂಕಿತರಿಗಾಗಿ 50 ಹಾಸಿಗೆಗಳ ಕ್ವಾರಂಟೈನ್ (ಪ್ರತ್ಯೇಕ) ವಾರ್ಡ್ ಅನ್ನು ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ 100 ಹಾಸಿಗೆಗಳ ವಾರ್ಡ್ ಆಗಿ ಪರಿವರ್ತಿಸಲಾಗುವುದು. ಇಲ್ಲಿಯವರೆಗೆ 14 ಜನರು ಹೋಂ ಐಸೋಲೇಷನ್ ಮುಗಿಸಿದ್ದಾರೆ. ಜೊತೆಗೆ ಪ್ರವಾಸಕ್ಕೆ ಬರುವ ವಿದೇಶಿಗರ ಮೇಲೆ ನಿಗಾ ವಹಿಸಲಾಗಿದೆ, 102 ವಿದೇಶಿಗರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಯಾರಲ್ಲಿಯೂ ಸೋಂಕು ಇರುವುದು ಪತ್ತೆಯಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಬೇಲೂರು, ಹಳೆಬೀಡು ಹಾಗೂ ಶ್ರವಣಬೆಳಗೊಳದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.