ETV Bharat / state

ಹಾಸನಾಂಬ ಜಾತ್ರಾ ಮಹೋತ್ಸವದ ಅಂತಿಮ ಹಂತದ ಸಿದ್ಧತೆ ಪೂರ್ಣ... - ಆಯ ಕಟ್ಟಿನ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾ

ಜಿಲ್ಲೆಯಲ್ಲಿ ವರ್ಷಕ್ಕೊಮ್ಮೆ ಆಚರಿಸುವ ಹಾಸನಾಂಬ ಜಾತ್ರಾ ಮಹೋತ್ಸವದ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದ್ದಾರೆ.

ಜಿಲ್ಲಾಧಿಕಾರಿ ಆರ್‌.ಗಿರೀಶ್‌
author img

By

Published : Oct 15, 2019, 10:16 PM IST

Updated : Oct 16, 2019, 9:36 AM IST

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ಜಾತ್ರಾ ಮಹೋತ್ಸವದ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದ್ದಾರೆ.

ಈ ಬಾರಿ 5 ರಿಂದ 6 ಲಕ್ಷ ಜನರು ಭೇಟಿ ನೀಡುವ ನಿರೀಕ್ಷೆ ಇದೆ. ದರ್ಶನೋತ್ಸವ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಭಕ್ತರು ಮಳೆಯಲ್ಲಿ ನೆನೆಯದಂತೆ ಸಾಲುಗಳಿಗೆ ವಾಟರ್‌ ಪ್ರೂಫ್‌ ಛಾವಣಿಯನ್ನು ಹಾಕಲಾಗುವುದು. 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ದರ್ಶನಕ್ಕೆ ದೇವಸ್ಥಾನದ ಹಿಂಭಾಗದಲ್ಲಿ ಪ್ರತ್ಯೇಕ ಸಾಲಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ವರ್ಷವೂ 24x7 ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾಧಿಕಾರಿ ಆರ್‌.ಗಿರೀಶ್‌

ಮಳೆಯಿಂದಾಗಿ ರಸ್ತೆ ದುರಸ್ತಿ ಕಾರ್ಯ ಸಂಪೂರ್ಣ ಮುಗಿದಿಲ್ಲ. ಗುಂಡಿಗಳನ್ನು ಮುಚ್ಚುವ ಕೆಲಸ ಭರದಿಂದ ಸಾಗಿದೆ. 17ರಂದು ಮಧ್ಯಾಹ್ನ 12.30ಕ್ಕೆ ದೇಗುಲದ ಬಾಗಿಲು ತೆರೆಯಲಾಗುತ್ತದೆ. ರಾತ್ರಿ 11 ರಿಂದ ಬೆಳಗ್ಗೆ 6ರವರೆಗೆ ನೈವೇದ್ಯ ಇರುವುದರಿಂದ ಸಾರ್ವಜನಿಕರಿಗೆ ದರ್ಶನ ಇಲ್ಲ. 18ರಂದು ಬೆಳಿಗ್ಗೆ 6 ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನೈವೇದ್ಯ ಅವಧಿಯನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುವುದು ಎಂದು ವಿವರಿಸಿದರು.

300 ರೂ. ಟಿಕೆಟ್‌ಗೆ ದೇಗುಲದ ಹಿಂಭಾಗ ಹಾಗೂ ₹1000 ಟಿಕೆಟ್‌ಗೆ ದೇಗುಲದ ಮುಂಭಾಗ ನೇರ ಪ್ರವೇಶ ಇದೆ. ದೇವಸ್ಥಾನದ ಮುಂಭಾಗದಿಂದ 20 ಕಲಾ ತಂಡಗಳ ಮೆರವಣಿಗೆ ನಡೆಯಲಿದೆ. ಸಪ್ತ ಮಾತೃಕೆಯರ ಸ್ತಬ್ಧಚಿತ್ರಗಳ ಮೆರವಣಿಗೆಯೂ ಇರಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಗಿದ್ದು, ಬರುವ ಬಗ್ಗೆ ಇನ್ನೂ ಖಾತ್ರಿ ಪಡಿಸಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹೊಸ್‌ ಬಸ್‌ ನಿಲ್ದಾಣ ಹಾಗೂ ರೈಲು ನಿಲ್ದಾಣದಿಂದ ದೇವಸ್ಥಾನಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಲಾಗುವುದು. ಸುರಕ್ಷತೆ ದೃಷ್ಟಿಯಿಂದ ಅಗತ್ಯ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದ್ದು, ಆಯಕಟ್ಟಿನ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ದೇಗುಲದ ಹುಂಡಿ ಹಣವನ್ನು ಅಭಿವೃದ್ಧಿ ಕಾರ್ಯಕ್ಕೆ ಕೈಗೊಳ್ಳಲಾಗುವುದು. 29ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಆರ್‌. ಗಿರೇಶ್‌ ಮಾಹಿತಿ ನೀಡಿದರು.

Intro:ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ಜಾತ್ರಾ ಮಹೋತ್ಸವದ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದರು.

ಈ ಬಾರಿ 5 ರಿಂದ 6 ಲಕ್ಷ ಜನರು ಭೇಟಿ ನೀಡುವ ನಿರೀಕ್ಷೆ ಇದೆ. ದರ್ಶನೋತ್ಸವ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಭಕ್ತರು ಮಳೆಯಲ್ಲಿ ನೆನೆಯದಂತೆ ಸರದಿ ಸಾಲುಗಳಿಗೆ ವಾಟರ್‌ ಪ್ರೂಫ್‌ ಛಾವಣಿಯನ್ನು ಹಾಕಲಾಗುವುದು. 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ದರ್ಶನಕ್ಕೆ ದೇವಸ್ಥಾನದ ಹಿಂಭಾಗದಲ್ಲಿ ಪ್ರತ್ಯೇಕ ಸರದಿ ಸಾಲಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ವರ್ಷವೂ 24*7 ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಳೆಯಿಂದಾಗಿ ರಸ್ತೆ ದುರಸ್ತಿ ಕಾರ್ಯ ಸಂಪೂರ್ಣ ಮುಗಿದಿಲ್ಲ. ಗುಂಡಿಗಳನ್ನು ಮುಚ್ಚುವ ಕೆಲಸ ಭರದಿಂದ ಸಾಗಿದೆ. 17ರಂದು ಮಧ್ಯಾಹ್ನ 12.30ಕ್ಕೆ ದೇಗುಲದ ಬಾಗಿಲು ತೆರೆಯಲಾಗುತ್ತದೆ. ರಾತ್ರಿ 11 ರಿಂದ ಬೆಳಗ್ಗೆ 6ರ ವರೆಗೆ ನೈವೇದ್ಯ ಇರುವುದರಿಂದ ಸಾರ್ವಜನಿಕರಿಗೆ ದರ್ಶನ ಇಲ್ಲ. 18ರಂದು ಬೆಳಿಗ್ಗೆ 6 ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನೈವೇದ್ಯ ಅವಧಿಯನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುವುದು ಎಂದು ವಿವರಿಸಿದರು.

₹ 300 ಟಿಕೆಟ್‌ ಗೆ ದೇಗುಲದ ಹಿಂಭಾಗ ಹಾಗೂ ₹ 1000 ಟಿಕೆಟ್‌ಗೆ ದೇಗುಲದ ಮುಂಭಾಗ ನೇರ ಪ್ರವೇಶ ಇದೆ. ದೇವಸ್ಥಾನದ ಮುಂಭಾಗದಿಂದ 20 ಕಲಾ ತಂಡಗಳ ಮೆರವಣಿಗೆ ನಡೆಯಲಿದೆ. ಸಪ್ತ ಮಾತೃಕೆಯರ ಸ್ತಬ್ಧಚಿತ್ರಗಳ ಮೆರವಣಿಗೆಯೂ ಇರಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಗಿದ್ದು, ಬರುವ ಬಗ್ಗೆ ಇನ್ನೂ ಖಾತ್ರಿ ಪಡಿಸಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಭಕ್ತರು ಆಯಾಸವಾದಾಗ ಕೂರಲು ಅಲ್ಲಲ್ಲಿ ಬೆಂಚ್‌ಗಳನ್ನು ಇರಿಸಲಾಗುವುದು ಎಂದರು.

ಹೊಸ್‌ ಬಸ್‌ ನಿಲ್ದಾಣ ಹಾಗೂ ರೈಲು ನಿಲ್ದಾಣದಿಂದ ದೇವಸ್ಥಾನಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಲಾಗುವುದು. ಸುರಕ್ಷತೆ ದೃಷ್ಟಿಯಿಂದ ಅಗತ್ಯ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದ್ದು, ಆಯ ಕಟ್ಟಿನ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ದೇಗುಲದ ಹುಂಡಿ ಹಣವನ್ನು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು. 29ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ನುಡಿದರು.

ಸುದ್ದಿಗೋಷ್ಠಿಯಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ರಾಮ ನಿವಾಸ್‌ ಸೆಪಟ್‌, ಉಪವಿಭಾಗಾಧಿಕಾರಿಗಳಾದ ಎಚ್‌.ಎಲ್‌.ನಾಗರಾಜ್‌, ಕವಿತಾ ರಾಜರಾಂ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ನಂದಿನಿ ಇದ್ದರು.

Body:ಬೈಟ್ 1 : ಆರ್.ಗಿರೀಶ್, ಜಿಲ್ಲಾಧಿಕಾರಿ.Conclusion:-ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Last Updated : Oct 16, 2019, 9:36 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.