ETV Bharat / state

ಪಂಚರಾಜ್ಯಗಳ ಚುನಾವಣೆ ಮುಗಿದಿದೆ, ಹಾಗಾಗಿ ಮತ್ತೆ ಬೆಲೆ ಏರಿಕೆಯಾಗುತ್ತಿದೆ: ಡಿ ಕೆ ಸುರೇಶ್ - ಕೇಂದ್ರ ಸರ್ಕಾರದ ವಿರುದ್ಧ ಡಿ ಕೆ ಸುರೇಶ್ ಆಕ್ರೋಶ

ಜನರ ಆರ್ಥಿಕ ಪರಿಸ್ಥಿತಿ ದುಃಸ್ಥಿತಿಯಲ್ಲಿದೆ. ಆದರೂ ಕೇಂದ್ರ ಸರ್ಕಾರ ಬೆಲೆ ಏರಿಕೆ ತಡೆಯುವುದರಲ್ಲಿ ವಿಫಲವಾಗಿದೆ ಎಂದು ಡಿ ಕೆ ಸುರೇಶ್ ಸುರೇಶ್​ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..

congress outrage on bjp government
ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ಆಕ್ರೋಶ
author img

By

Published : Mar 23, 2022, 7:51 AM IST

ಹಾಸನ: ಪಂಚರಾಜ್ಯಗಳ ಚುನಾವಣೆ ಮುಗಿದಿದೆ. ಹಾಗಾಗಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಸಿದ್ದಾರೆ. ಜನರೇ ಬಿಜೆಪಿ ಸರ್ಕಾರದ ಆಡಳಿತ ಮೆಚ್ಚಿದ್ದಾರೆ. ಹಾಗಾಗಿ ಅದರ ಬಗ್ಗೆ ನಾವು ಜಾಸ್ತಿ ಮಾತನಾಡಲ್ಲ ಎಂದು ಹಾಸನ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಡಿ ಕೆ ಸುರೇಶ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬೆಲೆ ಏರಿಕೆ ತಡೆಯುವುದರಲ್ಲಿ ವಿಫಲವಾಗಿದೆ ಎಂದರು.

ಜನರ ಆರ್ಥಿಕ ಪರಿಸ್ಥಿತಿ ದುಃಸ್ಥಿತಿಯಲ್ಲಿದೆ. ಚುನಾವಣೆ ಕಾರಣ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ತಡೆದಿದ್ದರು. ಒಂದೇ ಬಾರಿ ಏರಿಕೆ ಮಾಡಿದರೆ ಜನ ಪ್ರತಿಭಟನೆ ಮಾಡುತ್ತಾರೆ ಎನ್ನುವ ಕಾರಣಕ್ಕೆ ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಿದ್ದಾರೆ. ಇನ್ನೂ ಕೂಡ ಬೆಲೆ ಏರಿಕೆ ಮಾಡುತ್ತಾರೆ ಎಂದು ಭವಿಷ್ಯ ನುಡಿದರು. ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದಿಂದ ರಾಜ್ಯಕ್ಕೆ ಚುನಾವಣೆಗಳು ಬದಲಾಗುತ್ತವೆ. ಕರ್ನಾಟಕ ರಾಜ್ಯದ ಚುನಾವಣೆ ಬಹಳ ದೂರವಿದೆ. ಮುಂದೆ ಗುಜರಾತ್, ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣೆ ಇದೆ. ಆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಹೋರಾಡುತ್ತೇವೆ ಎಂದು ಡಿ ಕೆ ಸುರೇಶ್​ ಹೇಳಿದರು.

ಟಿಕೆಟ್​ಗಾಗಿ ಪಕ್ಷಕ್ಕೆ ಬರಬೇಡಿ: ಜೆಡಿಎಸ್​​ನ ಕೆಲ ಶಾಸಕರು ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಈವರೆಗೂ ಹಾಸನ ಜಿಲ್ಲೆಯ ಜೆಡಿಎಸ್ ಶಾಸಕರ್ಯಾರೂ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ. ಟಿಕೆಟ್​ಗಾಗಿ ಕಾಂಗ್ರೆಸ್ ಪಕ್ಷಕ್ಕೆ ಯಾರೂ ಬರುವುದು ಬೇಡ. ಸಾಮಾನ್ಯ ಕಾರ್ಯಕರ್ತನಾಗಿ ಬಂದರೆ ಸ್ವಾಗತ ಎಂದು ಪರೋಕ್ಷವಾಗಿ ಕೆ.ಎಂ.ಶಿವಲಿಂಗೇಗೌಡ ಮತ್ತು ಎ.ಮಂಜುಗೆ ಟಾಂಗ್​​ ನೀಡಿದರು.

ದಿ ಕಾಶ್ಮೀರ್​ ಫೈಲ್ಸ್ ಸಿನಿಮಾ ಬಗ್ಗೆ ಮಾತನಾಡಿ, ವಿ.ಪಿ. ಸಿಂಗ್ ಇದ್ದಾಗ ಕಾಶ್ಮೀರದಲ್ಲಿ ನಡೆದಿದ್ದ ಘಟನೆಯಲ್ಲಿ ಎಲ್.ಕೆ.ಅಡ್ವಾಣಿ ಅವರು ಒಂದು ಭಾಗವಾಗಿದ್ದರು. ಅವರು ಮಾಡಿದ್ದೇ ಸರಿ ಎನ್ನುವ ರೀತಿಯಲ್ಲಿ ಮಾಧ್ಯಮದವರು ಹೇಳುತ್ತಿದ್ದೀರಿ. ವಿರೋಧ ಪಕ್ಷಗಳು ಇರುವುದೇ ಎಲ್ಲದಕ್ಕೂ ವಿರೋಧ ಮಾಡಲು ಎನ್ನುವ ರೀತಿ ಬಿಂಬಿಸುತ್ತಿದ್ದೀರಿ. ಅವರು ನಿಮ್ಮನ್ನು ಆಳುತ್ತಿದ್ದಾರೆ, ನಾವು ನಿಮ್ಮನ್ನು ನಂಬಿ ಬಂದಿದ್ದೀವಿ ಎಂದು ಕಿಡಿಕಾರಿದರು.

ಇದನ್ನೂ ಓದಿ: ವ್ಯಕ್ತಿಯ ಕೊಲೆ ಮಾಡಿ ಕಾರಿಗೆ ಬೆಂಕಿಯಿಟ್ಟ ಪ್ರಕರಣ: ಮೂವರು ಆರೋಪಿಗಳ ಬಂಧನ!

ಇನ್ನು ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಿ ವಿಚಾರವಾಗಿ ಮಾತನಾಡಿ, ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಏನೇ ಮಾತನಾಡಲಿ. ತಮಿಳುನಾಡಿನ ಅನುಮತಿ ಬೇಕಾಗಿಲ್ಲ. ಮುಖ್ಯಮಂತ್ರಿಗಳು ಪರಿಸರ ಇಲಾಖೆ ಅನುಮತಿ ಪಡೆದರೆ ಸಾಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಬಿಜೆಪಿ ಸರ್ಕಾರವಿದೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಅನುಕೂಲವಾಗುತ್ತೆಯೇ ಹೊರತು ಅನಾನೂಕೂಲ ಆಗುವುದಿಲ್ಲ. 25 ಸಂಸದರನ್ನು ರಾಜ್ಯದ ಜನ ಆಯ್ಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪರಿಸರ ಇಲಾಖೆಯ ಅನುಮತಿ ಪಡೆಯದಿದ್ದರೆ ಸಂಸದರು ಕರ್ನಾಟಕ ರಾಜ್ಯಕ್ಕೆ ಮಾಡಿದ ದೊಡ್ಡ ದ್ರೋಹವಾಗುತ್ತದೆ. ನೀರನ್ನು ಸಮುದ್ರ ಪಾಲು ಮಾಡಲು ಇವರೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.