ಹಾಸನ: ನಿನ್ನೆ ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜತ್ತೇನಹಳ್ಳಿ ರಾಮಚಂದ್ರ ಅವರು ತಮ್ಮ ಮೇಲೆ ಮಾಡಿದ್ದ ಆರೋಪಗಳಿಗೆ ಪ್ರತಿಕ್ರಿಯೆ ನೀಡುವ ಸಲುವಾಗಿ ಶಾಸಕ ಸಿ. ಎನ್. ಬಾಲಕೃಷ್ಣ ಇಂದು ಸುದ್ದಿಗೋಷ್ಠಿಯನ್ನು ನಡೆಸಿದರು.
ಚನ್ನರಾಯಪಟ್ಟಣದಲ್ಲಿ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜತ್ತೇನಹಳ್ಳಿ ರಾಮಚಂದ್ರ ಅವರು ಸ್ಥಳೀಯ ಜೆಡಿಎಸ್ ಶಾಸಕ ಸಿ. ಎನ್. ಬಾಲಕೃಷ್ಣ ವಿರುದ್ಧವಾಗಿ ಕೆಲವು ಆರೋಪಗಳನ್ನು ಮಾಡಿದ್ದರು. ಆ ಆರೋಪಗಳಿಗೆ ಉತ್ತರಿಸುವ ಸಲುವಾಗಿ ಇಂದು ಶಾಸಕ ಬಾಲಕೃಷ್ಣರವರು ಸುದ್ದಿಗೋಷ್ಠಿ ನಡೆಸಿದರು.
ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಯಾರೇ ಆಗಲಿ ಜನರ ದಿಕ್ಕು ತಪ್ಪಿಸುವಂತಹ ಕೆಲಸವನ್ನು ಮಾಡಬಾರದು. ಯಾವುದೇ ಆಗಲಿ ಅದರ ಬಗ್ಗೆ ತಿಳಿದುಕೊಂಡು ಮಾತನಾಡಬೇಕು. ನಾವು ರೈತರ ಪರ ಕೆಲಸವನ್ನು ಮಾಡುತ್ತಿದ್ದೇವೆ ಹಾಗಾಗಿ ನಾಲ್ಕು ಬಾರಿ ಸಭೆ ಕರೆದು ಅದರ ಆಗು-ಹೋಗುಗಳ ಬಗ್ಗೆ ವಿಚಾರಿಸಿದ್ದೇವೆ ಎಂದರು.