ETV Bharat / state

ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು ಆರೋಪ: ಆಸ್ಪತ್ರೆ ಮುಂದೆ ಶವವಿಟ್ಟು ಪೋಷಕರ ಪ್ರತಿಭಟನೆ - ನಾಗೇಶ್​ ಆಸ್ಪತ್ರೆಯಲ್ಲಿ ಚಿಕಿತ್ಸೆ

ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಗುಲಸಿಂದ ಗ್ರಾಮದ ಹೇಮಂತ್ ಕುಮಾರ್ ಎಂಬುವರು ನಾಗೇಶ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. ಅವನ ಸಾವೀಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆಯ ಮುಂದೆ ಮೃತನ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ.

ವೈದ್ಯರ ನಿರ್ಲಕ್ಷ್ಯ ವ್ಯಕ್ತಿ ಸಾವು ಆರೋಪ
author img

By

Published : Oct 3, 2019, 4:52 PM IST

ಹಾಸನ: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆಯ ಮುಂದೆ ಮೃತನ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ನಾಗೇಶ್ ಆಸ್ಪತ್ರೆಯಲ್ಲಿ ನಡೆದಿದೆ.

ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ತಾಲೂಕಿನ ಗುಲಸಿಂದ ಗ್ರಾಮದ ಹೇಮಂತ್ ಕುಮಾರ್ (36) ಚಿಕಿತ್ಸೆಗಾಗಿ ಪಟ್ಟಣದ ನಾಗೇಶ್​​ ಆಸ್ಪತ್ರೆಗೆ ದಾಖಲಾಗಿ ವಾರಗಳ ಕಾಲ ಚಿಕಿತ್ಸೆ ಪಡೆದಿದ್ದ. ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವಂತೆ ಹೇಳಿದ್ರು. ಅದರಂತೆ ಪೋಷಕರು ಇಂದು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಆತ ಸಾವಿಗೀಡಾಗಿದ್ದಾನೆ.

ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು ಆರೋಪ

ಆದರೆ ಕಳೆದ ಒಂದು ವಾರದಿಂದ ಆರೋಗ್ಯವಾಗಿದ್ದ. ಆತನಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ವೈದ್ಯರು ಯಡವಟ್ಟು ಮಾಡಿದ್ದಾರೆ. ಅದನ್ನ ಮುಚ್ಚಿಕೊಳ್ಳಲು ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಂತ ಹೇಳಿ ನಮ್ಮನ್ನು ಯಾಮಾರಿಸಿದ್ದು, ಮಾರ್ಗ ಮಧ್ಯೆ ಹೇಮಂತ್ ಮೃತಪಟ್ಟಿದ್ದಾನೆ. ಈತನ ಸಾವಿಗೆ ಪರೋಕ್ಷವಾಗಿ ನಾಗೇಶ್ ಆಸ್ಪತ್ರೆಯ ವೈದ್ಯರೇ ಕಾರಣ ಎಂಬುದು ಪೋಷಕರ ಗಂಭೀರ ಆರೋಪವಾಗಿದೆ.

ಇನ್ನು ಹೇಮಂತ್​ ಮೃತದೇಹವನ್ನ ನಾಗೇಶ್ ಆಸ್ಪತ್ರೆಯ ಮುಂಭಾಗದಲ್ಲಿ ಇಟ್ಟು ನ್ಯಾಯ ಕೊಡಿಸುವಂತೆ ಪೋಷಕರು ಆಗ್ರಹಿಸುತ್ತಿದ್ದಾರೆ. ಆಸ್ಪತ್ರೆ ಮುಂಭಾಗದಲ್ಲಿ ಸಾವಿರಾರು ಜನರು ಜಮಾವಣೆಗೊಂಡಿದ್ದು, ಚನ್ನರಾಯಪಟ್ಟಣ-ಮೈಸೂರು ಮತ್ತು ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡು ಆಸ್ಪತ್ರೆಯ ಮುಂಭಾಗದಲ್ಲಿ ಜಮಾವಣೆಗೊಂಡಿರುವ ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಪ್ರಕರಣ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Intro:ಹಾಸನ: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ವೈದ್ಯರ ನಿರ್ಲಕ್ಷದಿಂದ ಮೃತಪಟ್ಟಿದ್ದಾನೆ ಅಂತ ಆರೋಪಿಸಿ ಆಸ್ಪತ್ರೆಯ ಮುಂದೆ ಮೃತನ ಪೋಷಕರು ಪ್ರತಿಭಟನೆ ಮಾಡುತ್ತಿದ್ದು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಾಗೇಶ್ ಆಸ್ಪತ್ರೆಯ ಮುಂಭಾಗದಲ್ಲಿ ಮೃತನ ಶವವಿಟ್ಟು ಆಸ್ಪತ್ರೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.

ಒಂದು ವಾರದಿಂದ ಜ್ವರದಿಂದ ನರಳುತ್ತಿದ್ದ ತಾಲೂಕಿನ ಗುಲಸಿಂದ ಗ್ರಾಮದ ಹೇಮಂತ್ ಕುಮಾರ್(36) ಚಿಕಿತ್ಸೆಗಾಗಿ ಪಟ್ಟಣದ ನಾಗೇಶ ಆಸ್ಪತ್ರೆಗೆ ದಾಖಲಾಗಿ ವಾರಗಳ ಕಾಲ ಚಿಕಿತ್ಸೆ ಪಡೆಯುತ್ತಾನೆ. ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವಂತೆ ಹೇಳಿದ್ದು,ಅದರಂತೆ ಪೋಷಕರು ಆತನನ್ನು ಇಂದು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಆತ ಸಾವಿಗೀಡಾಗಿದ್ದಾನೆ.

ಆದರೆ ಕಳೆದ ಒಂದು ವಾರದಿಂದ ಆರೋಗ್ಯವಾಗಿ ಇದ್ದ. ಆದರೆ ಆತನಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ವೈದ್ಯರು ಎಡವಟ್ಟು ಮಾಡಿದ್ದಾರೆ. ಅದನ್ನ ಮುಚ್ಚಿಕೊಳ್ಳಲು ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಂತ ಹೇಳಿ ನಮ್ಮನ್ನು ಯಾಮಾರಿಸಿದ್ದು, ಮಾರ್ಗಮಧ್ಯೆ ಹೇಮಂತ್ ಮೃತಪಟ್ಟಿದ್ದು, ಈತನ ಸಾವಿಗೆ ಪರೋಕ್ಷವಾಗಿ ನಾಗೇಶ್ ಆಸ್ಪತ್ರೆಯ ವೈದ್ಯರೇ ಕಾರಣ ಎಂಬುದು ಪೋಷಕರ ಗಂಭೀರ ಆರೋಪ.

ಇನ್ನು ಮೃತಪಟ್ಟ ಹೇಮಂತ ದೇಹವನ್ನ ನಾಗೇಶ್ ಆಸ್ಪತ್ರೆಯ ಮುಂಭಾಗದಲ್ಲಿ ಇಟ್ಟು ನ್ಯಾಯ ಕೊಡಿಸುವಂತೆ ಪೋಷಕರು ಆಗ್ರಹಿಸುತ್ತಿದ್ದಾರೆ. ಆಸ್ಪತ್ರೆ ಮುಂಭಾಗದಲ್ಲಿ ಸಾವಿರಾರು ಜನರು ಜಮಾವಣೆಗೊಂಡಿದ್ದು, ಚನ್ನರಾಯಪಟ್ಟಣ- ಮೈಸೂರು ಮತ್ತು ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡು, ಆಸ್ಪತ್ರೆಯ ಮುಂಭಾಗದಲ್ಲಿ ಜಮಾವಣೆ ಗೊಂಡಿರುವ ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಒಟ್ಟಾರೆ ಹೇಮಂತ್ ಸಾವಿಗೆ ನಾಗೇಶ್ ಆಸ್ಪತ್ರೆಯ ವೈದ್ಯರು ಕಾರಣವಾ. . . ? ಅಥವಾ ಹೆಚ್ಚಿನ ಚಿಕಿತ್ಸೆಗೆ ಸ್ಪಂದಿಸದೆ ಆತ ಸಾವಿಗೀಡಾಗಿದ್ದಾನೆಯೇ. . .? ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ. ಆದರೆ ಮೃತ ಪ್ರೇಕ್ಷಕರ ಆಕ್ರಂದನ ಮಾತ್ರ ಮುಗಿಲುಮುಟ್ಟಿದೆ.

ಇನ್ನು ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

Body:0

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.