ಹಾಸನ: ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೇಮಂತ್ ಗೌಡ (20) ಮೃತ ವಿದ್ಯಾರ್ಥಿ. ಹಾಸನ ಹೊರವಲಯದ ರಾಜೀವ್ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ಹಿರಿಯಾಳು ಗ್ರಾಮದವನಾದ ಈತ, ರಾಜೀವ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ತಂದೆ ತೋಪೇಗೌಡ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.