ಹಾಸನ: ವಿಷ ಕುಡಿದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.
ಅರಸೀಕೆರೆಯ ನಾಗತಿಹಳ್ಳಿಯ ಸೋಮಶೇಖರ್ (60) ಎರಡು ದಿನದ ಹಿಂದೆ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ತಾಲೂಕಿನ ಬಾಗೇಶ್ಪುರ ಬ್ಯಾಂಕಿನಲ್ಲಿ ಒಂದು ಲಕ್ಷ ರೂ. ಸಾಲ ಮಾಡಿದ್ದ ಇವರು, ಲಾಕ್ಡೌನ್ ಸಂದರ್ಭದಲ್ಲಿ ಕೆಲಸ ಸಿಗದೆ ಪರದಾಡಿದರು. ಜೊತೆಗೆ ಸರಿಯಾದ ಸಮಯಕ್ಕೆ ಮಳೆ ಬಾರದ ಹಿನ್ನೆಲೆ ಬೆಳೆ ಹಾಳಾಗಿ ಹೋಗಿದ್ದು, ಸಾಲ ಮರುಪಾವತಿ ಮಾಡುವಂತೆ ಬ್ಯಾಂಕ್ನಿಂದ 2 ಬಾರಿ ನೋಟಿಸ್ ನೀಡಲಾಗಿತ್ತು. ಇದರಿಂದಾಗಿ ಮನನೊಂದ ರೈತ, 2 ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬ ಮಾಹಿತಿ ದೊರೆತಿದೆ.
ಇಂದು ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.