ಅರಕಲಗೂಡು: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಾಥಪುರದಲ್ಲಿ ನಡೆದಿದೆ.
ಮಂಜೇಗೌಡ ಬಿನ್ ಸ್ವಾಮಿಗೌಡ (45) ಆತ್ಮಹತ್ಯೆಗೆ ಶರಣಾದ ರೈತ. ಈತ ರಾಮನಾಥಪುರದ ಕೆನರಾ ಬ್ಯಾಂಕ್ನಲ್ಲಿ 4 ಲಕ್ಷ ರೂ. ಸಾಲ ಮಾಡಿದ್ದು, 2 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಅದನ್ನು ತೀರಿಸಲಾಗದೆ ಹೊಲದ ಬಳಿ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.