ETV Bharat / state

ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ.. - Hassan ring road construction news

ಡೈರಿ ವೃತ್ತದಿಂದ ಬೇಲೂರು ರಸ್ತೆಗೆ ರಿಂಗ್ ರಸ್ತೆ ನಿರ್ಮಾಣ ಮಾಡಲು 110 ಅಡಿ ಜಾಗವನ್ನು ರೈತರಿಗೆ ಯಾವುದೇ ಮಾಹಿತಿ ನೀಡದೆ ವಶಪಡಿಸಿಕೊಂಡು, ಪರಿಹಾರದ ಹಣವನ್ನು ನಿಗದಿಪಡಿಸದೆ ಕಾಮಗಾರಿಯನ್ನು ಮತ್ತೆ ಆರಂಭಿಸಿದ್ದಾರೆ.

Protest
Protest
author img

By

Published : Jun 3, 2020, 3:46 PM IST

ಹಾಸನ : ಡೈರಿ ವೃತ್ತದಿಂದ ಬೇಲೂರು ರಸ್ತೆಯವರೆಗೆ ರಿಂಗ್ ರೋಡ್ ನಿರ್ಮಾಣ ಮಾಡಲು ರೈತರ ಜಾಗವನ್ನು ವಶಪಡಿಸಿಕೊಂಡಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಪ್ರತಿಭಟನೆ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಮಾಜಿಕ ಅಂತರದಲ್ಲಿ ಮೌನ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಈ ಕುರಿತು ಸರ್ಕಾರ ಸೂಕ್ತ ಕ್ರಮಕೈಗೊಳ್ಳದಿದ್ದರೆ ರಸ್ತೆ ಬಂದ್ ಮಾಡಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದರು.

ನಂತರ ತಮ್ಲಾಪುರ ಗ್ರಾಮದ ಗಣೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಡೈರಿ ವೃತ್ತದಿಂದ ಬೇಲೂರು ರಸ್ತೆಗೆ ರಿಂಗ್ ರಸ್ತೆ ನಿರ್ಮಾಣ ಮಾಡಲು 110 ಅಡಿ ಜಾಗವನ್ನು ರೈತರಿಗೆ ಯಾವುದೇ ಮಾಹಿತಿ ನೀಡದೆ ವಶಪಡಿಸಿಕೊಂಡು, ಪರಿಹಾರದ ಹಣವನ್ನು ನಿಗದಿಪಡಿಸದೆ ಕಾಮಗಾರಿಯನ್ನು ಮತ್ತೆ ಆರಂಭಿಸಿದ್ದಾರೆ. ಗ್ರಾಮದ ಜಮೀನಿನ ಮಾಲೀಕರು ಈ ಹಿಂದೆ ಇದ್ದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಇದುವರೆಗೆ ಪರಿಹಾರದ ಹಣ ನಿಗದಿಪಡಿಸಿಲ್ಲ. ಜೊತೆಗೆ ಯಾವ ಸಭೆಯನ್ನು ನಡೆಸಿಲ್ಲ.

ಈ ಕುರಿತು ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವುದರ ಜೊತೆಗೆ ಸಂಬಂಧಪಟ್ಟ ಇಲಾಖೆಗಳಿಗೂ ಸ್ಪಂದಿಸುವಂತೆ ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.