ETV Bharat / state

ಟ್ಯೂಷನ್‌ಗೆ ಮಗಳನ್ನು ಬಿಡಲು ಬಂದಿದ್ದ ತಂದೆ,  ಹೃದಯಾಘಾತದಿಂದ ಸಾವು..

ಮಗಳನ್ನು ಟ್ಯೂಷನ್‌ಗೆ ಬಿಡಲು ಬಂದಿದ್ದ ತಂದೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.

father-who-came-to-drop-off-his-daughter-for-tuition-died-of-heart-attack-in-hassan
ಟ್ಯೂಷನ್‌ಗೆ ಮಗಳನ್ನು ಬಿಡಲು ಬಂದಿದ್ದ ತಂದೆ ಹೃದಯಾಘಾತದಿಂದ ಸಾವು..
author img

By

Published : Jul 19, 2023, 4:15 PM IST

ಹಾಸನ: ಮಗಳನ್ನು ಟ್ಯೂಷನ್‌ಗೆ ಬಿಡಲು ಬಂದಿದ್ದ ತಂದೆಗೆ ಹೃದಯಾಘಾತವಾಗಿ, ರಸ್ತೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮಣ (42) ಎಂದು ಗುರುತಿಸಲಾಗಿದೆ. ಎಂದಿನಂತೆ ಜು.17 ರಂದು ಬೆಳಗ್ಗೆ 5.30ರ ಸುಮಾರಿಗೆ ಲಕ್ಷ್ಮಣ ದ್ವಿಚಕ್ರ ವಾಹನದಲ್ಲಿ ತನ್ನ ಮಗಳನ್ನು ಟ್ಯೂಷನ್‌ಗೆ ಬಿಡಲು ಬಂದಿದ್ದರು. ಟ್ಯೂಷನ್ ಸೆಂಟರ್ ಮುಂದೆ ಬೈಕ್ ನಿಲ್ಲಿಸಿ, ಮಗಳು ಬೈಕ್​ನಿಂದ ಇಳಿದು ಟ್ಯೂಷನ್‌ ಸೆಂಟರ್ ಬಾಗಿಲಿಗೆ ಹೋಗುತ್ತಿದ್ದಂತೆ ಲಕ್ಷ್ಮಣ ಬೈಕ್‌ನಿಂದ ಕುಸಿದು ಬಿದ್ದಿದ್ದರು.

ಅಪ್ಪ ಕುಸಿದು ಬಿದ್ದಿದ್ದನ್ನು ಕಂಡ ಮಗಳು ವಾಪಸ್ ಓಡಿ ಬಂದಿದ್ದಾಳೆ. ಅಪ್ಪನ ಸ್ಥಿತಿ ಕಂಡು ದಿಕ್ಕು ತೋಚದೇ ಮಗಳು ನೋಡುತ್ತಾ ನಿಂತಿದ್ದಾಳೆ‌.‌ ಈ ವೇಳೆ ವಾಕಿಂಗ್ ಹೋಗುತ್ತಿದ್ದ‌ ಕೆಲವರು ಲಕ್ಷ್ಮಣಗೆ ಆರೈಕೆ ಮಾಡಿ. ನಂತರ ಆಟೋದಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ದುರಾದೃಷ್ಟವಶಾತ್​ ಲಕ್ಷ್ಮಣ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಲಕ್ಷ್ಮಣ ಹಾಸನದ‌ ಹೇಮಾವತಿ ನಗರದಲ್ಲಿ ದಿನಸಿ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಕುಟುಂಬದ ಆಧಾರಸ್ಥಂಭವಾಗಿದ್ದ ಅವರನ್ನು ಕಳೆದುಕೊಂಡ ಕುಟುಂಬ ಈಗ ಸಂಕಷ್ಟಕ್ಕೆ ಸಿಲುಕಿದೆ. ಈ ಘಟನೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: Heart attack: ಜಿಮ್‌ನಲ್ಲಿ ವರ್ಕೌಟ್ ಮಾಡಿದ ಬಳಿಕ ಎದೆಯಲ್ಲಿ ನೋವು.. ಹಠಾತ್ ಹೃದಯಾಘಾತದಿಂದ ಯುವಕ ಸಾವು

ಕರ್ತವ್ಯನಿರತ ಸಹಾಯಕ ಸಬ್​ ಇನ್ಸ್​ಪೆಕ್ಟರ್ ಹೃದಯಾಘಾತದಿಂದ ಸಾವು: ಇತ್ತೀಚಿಗೆ, ಕರ್ತವ್ಯನಿರತ ಎಎಸ್‌ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ಪೊಲೀಸ್ ಠಾಣೆಯಲ್ಲಿ ಜು.7ರಂದು ನಡೆದಿತ್ತು. ಶಿರಾ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಗಂಗಣ್ಣ (56) ಮೃತಪಟ್ಟಿದ್ದರು. ಗಂಗಣ್ಣ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಕರ್ತವ್ಯದಲ್ಲಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಜೊತೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತುಮಕೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಇತ್ತೀಚಗೆ ಯುವಕರು ಹೆಚ್ಚಾಗಿ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಈ ಸಂಬಂಧದ ವರದಿಗಳು ದೇಶಾದ್ಯಂತ ವರದಿಯಾಗುತ್ತಿವೆ. ಅತಿಯಾದ ವ್ಯಾಯಾಮ, ಆಹಾರ ಪದ್ಧತಿ ಹೀಗಾ ನಾನಾ ಸಮಸ್ಯೆಗಳಿಂದ ಹೃದಯಾಘಾತ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಹೃದಯಾಘಾತದ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿರುವುದು ಅವಶ್ಯಕ. ನಿಯಮಿತವಾಗಿ ವೈದ್ಯರ ಬಳಿ ಆಗಾಗ್ಗೆ ತಪಾಸಣೆ ಮಾಡಿಸಿಕೊಳ್ಳುವಂತೆ ತಜ್ಞರು ಸಲಹೆಗಳನ್ನು ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.