ಹಾಸನ : ಕೊರೊನಾ ಮುಕ್ತರಾದ ಹೊಳೆನರಸೀಪುರ ಠಾಣೆಯ ಪಿಎಸ್‌ಐ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಪುಷ್ಪವೃಷ್ಠಿ ಮೂಲಕ ಬೀಳ್ಕೊಡಲಾಯಿತು.
ಬೆಳಗಾವಿ ಜಿಲ್ಲೆ ನಿಪ್ಪಾಣಿ ಚೆಕ್ ಪೋಸ್ಟ್‌ನಲ್ಲಿ ನಿಯೋಜನೆಗೊಂಡಿದ್ದ ಪಿಎಸ್‌ಐ ಹಾಗೂ ಕಾನ್ಸ್ಟೆಬಲ್ಗಳು ಮೇ 23ರಂದು ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆ ಇವರನ್ನು ಪರೀಕ್ಷೆಗೊಳಪಡಿಸಿ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಬಳಿಕ ಬಂದ ಪರೀಕ್ಷಾ ವರದಿಯಲ್ಲಿ ನಾಲ್ವರಿಗೂ ಕೊರೊನಾ ದೃಢಪಟ್ಟಿತ್ತು. ಹೀಗಾಗಿ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಗುಣಮುಖರಾದ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಕ್ವಾರಂಟೈನ್ ಅವಧಿ ಪೂರ್ಣಗೊಂಡ ಹಿನ್ನೆಲೆ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್‌ಕುಮಾರ್, ಜಿಲ್ಲಾಧಿಕಾರಿ ಆರ್ ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠ ಆರ್. ಗಿರೀಶ್ ಇದ್ದರು.
ಬುಧವಾರ ಒಂದು ಪಾಸಿಟಿವ್ ಪ್ರಕರಣ ಪತ್ತೆ:
ಗುಜರಾತ್‌ನಿಂದ ಜಿಲ್ಲೆಗೆ ಆಗಮಿಸಿದ್ದ 30 ವರ್ಷದ ವ್ಯಕ್ತಿ (ಪಿ3993)ಗೆ ಬುಧವಾರ ಕೊರೊನಾ ಸೋಂಕು ದೃಢಪಟ್ಟಿದೆ. ಹಾಸ್ಟೆಲ್ನಲ್ಲಿ ಕ್ವಾರಂಟೈನ್‌ನಲ್ಲಿದ್ದ ಇವರಿಗೆ ಎರಡನೇ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 183ಕ್ಕೆ ಏರಿಕೆಯಾಗಿದೆ. 58 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 124 ಸಕ್ರಿಯ ಪ್ರಕರಣಗಳಿವೆ.