ಹಾಸನ: ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಸುಮಾರು ಎರಡು ಎಕರೆಯಲ್ಲಿ ಬೆಳೆದಿದ್ದ ಭತ್ತ ಮತ್ತು ರಾಗಿ ಬಣವೆಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ಸುಮಾರು ಎರಡು ಎಕರೆಯಲ್ಲಿ ಭತ್ತ ಮತ್ತು ರಾಗಿ ಬೆಳೆಯಲಾಗಿತ್ತು. ಕಿಡಿಗೇಡಿಗಳ ಕೃತ್ಯಕ್ಕೆ ಬಣವೆಯ ಮಾಲೀಕ ಕಿಟ್ಟಣ್ಣ ಕಣ್ಣೀರಿಡುವಂತಾಗಿದೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಕಟಾವು ಮಾಡಿದ್ದ ಬೆಳೆಗಳನ್ನು ಸಂಗ್ರಹಣೆ ಮಾಡಲಾಗಿತ್ತು.
ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಲೀಕ ಕಿಟ್ಟಣ್ಣ ದೂರು ನೀಡಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.