ಹಾಸನ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ದಿನಸಿ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ವಸ್ತುಗಳೆಲ್ಲ ಸುಟ್ಟು ಕರಕಲಾಗಿ ಅಂದಾಜು 10 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಪದಾರ್ಥಗಳು ಬೆಂಕಿಗಾಹುತಿಯಾದ ಘಟನೆ ನಗರದಲ್ಲಿ ನಡೆದಿದೆ.
ನಗರದ ಅಡ್ಲಿಮನೆ ರಸ್ತೆ ಬಳಿಯ ಕುಂಬಾರ ಬೀದಿಯ ಸುಜಾತ ಎಂಬುವರ ಲಕ್ಷ್ಮಿ ಸ್ಟೋರ್ ಅಂಗಡಿಯಲ್ಲಿ ಈ ಅನಾಹುತ ಸಂಭವಿಸಿದೆ. ಅಗ್ನಿಶಾಮಕ ದಳದವರು ಬಂದು ಬೆಂಕಿನಂದಿಸಿದರಾದರೂ ಅಷ್ಟರಲ್ಲಾಗಲೇ ಅಂಗಡಿಯಲ್ಲಿದ್ದ ವಸ್ತುಗಳೆಲ್ಲ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಗಡಿ ಮಾಲೀಕರಾದ ಸುಜಾತ ಪರಿಹಾರಕ್ಕೆ ಮನವಿ ಮಾಡಿದ್ದಾರೆ.