ಸಕಲೇಶಪುರ: ಕೊರೊನಾ ವೈರಸ್ ಭೀತಿ ಹಾಗೂ ಇತರೆ ಯಾವುದೇ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪುರಸಭೆ ಮತ್ತು ಅಗ್ನಿಶಾಮಕದಳ ಇಲಾಖೆ ನೇತೃತ್ವದಲ್ಲಿ ಪಟ್ಟಣದ ಹಲವೆಡೆ ಫಾಗಿಂಗ್ ಮಾಡುವ ಕಾರ್ಯಕ್ಕೆ ಶಾಸಕ ಎಚ್.ಕೆ ಕುಮಾರಸ್ವಾಮಿ ಚಾಲನೆ ನೀಡಿದರು.
ಶಾಸಕ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಪಟ್ಟಣ ವ್ಯಾಪ್ತಿಯಲ್ಲಿ ಕೊರೊನಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳು ಹರಡಬಾರದೆಂಬ ದೃಷ್ಟಿಯಿಂದ ಅಗ್ನಿಶಾಮಕ ದಳ ಹಾಗೂ ಪುರಸಭೆ ಸಹಯೋಗದಲ್ಲಿ ಫಾಗಿಂಗ್ ಕಾರ್ಯ ನಡೆಸಲು ನಿರ್ಧರಿಸಲಾಗಿದೆ. ಮೊದಲ ದಿನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಫಾಗಿಂಗ್ ಮಾಡಲಾಗಿದೆ. ಎರಡನೇ ದಿನ ವಿವಿಧ ಬಡಾವಣೆಗಳಲ್ಲಿ ಫಾಗಿಂಗ್ ಮಾಡಲಾಗುತ್ತದೆ ಎಂದು ತಿಳಿಸಿದರು.
ಉಪವಿಭಾಗಾಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಸ್ಟೀಫನ್ ಪ್ರಕಾಶ್, ಅಗ್ನಿಶಾಮಕ ದಳದ ಸಿಬ್ಬಂದಿ ಉಪಸ್ಥಿತರಿದ್ದರು.