ಹಾಸನ: ಜಿಲ್ಲೆಯ ಒಂದೇ ಕುಟುಂಬದ ಐವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಕಾಣಿಸಿಕೊಂಡಿದೆ. ಮುಂಬೈ ಹಾಗೂ ಕೋಲ್ಕತ್ತಾದಿಂದ ಬಂದಿದ್ದ 171 ಮಂದಿಯನ್ನು ಚನ್ನರಾಯಪಟ್ಟಣದ ಮೊರಾರ್ಜಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಕೆಲ ದಿನಗಳ ಹಿಂದೆ ಅವರ ರಕ್ತ ಪರೀಕ್ಷೆ ಹಾಗೂ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಮುಂಬೈನಿಂದ ಬಂದಿದ್ದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈಗ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.