ETV Bharat / state

ಹಾಸನದಲ್ಲಿಂದು 5 ಕೊರೊನಾ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 249ಕ್ಕೆ ಏರಿಕೆ

author img

By

Published : Jun 17, 2020, 12:26 PM IST

Updated : Jun 17, 2020, 9:22 PM IST

ಹಾಸನ ಜಿಲ್ಲೆಯಲ್ಲಿ ಮತ್ತೆ ಐದು ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈವರೆಗೆ ಒಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, 56 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Hassan
ಅರಕಲಗೂಡು

ಹಾಸನ: ಜಿಲ್ಲೆಯಲ್ಲಿ ಇಂದು ಹೊಸ 5 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 249ಕ್ಕೆ ಏರಿಕೆಯಾಗಿದೆ.

ಇದುವರೆಗೆ 192 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, 56 ಮಂದಿ ಸಕ್ರಿಯ ಸೋಂಕಿತರಿಗೆ ಹಾಸನದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಸನ ಹಾಗೂ ಚನ್ನರಾಯಪಟ್ಟಣ ತಾಲೂಕಿನ ತಲಾ ಇಬ್ಬರಿಗೆ ಹಾಗೂ ಅರಕಲಗೂಡು ತಾಲೂಕಿನಲ್ಲಿ ಒಬ್ಬರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.

ಇವರೆಲ್ಲರೂ ಕೂಡ ಮುಂಬೈಯಿಂದ ಬಂದವರಾಗಿದ್ದು, ಚೆನ್ನೈನಿಂದ ಹಾಸನಕ್ಕೆ ಬಂದ ಒಬ್ಬರು ಹಾಗೂ ಮಹಾರಾಷ್ಟ್ರದಿಂದ ಬಂದ ನಾಲ್ವರನ್ನು ತಪಾಸಣೆಗೆ ಒಳಪಡಲಾಗಿದ್ದು, ಐಸೋಲೇಷನ್ ಮಾಡಿ ಗಂಟಲು ದ್ರವ ಸಂಗ್ರಹ ಮಾಡಿ ಟೆಸ್ಟ್‌ಗೆ ಕಳುಹಿಸಲಾಗಿತ್ತು. ಇಂದು ಬಂದ ವರದಿಯಲ್ಲಿ ಐವರಲ್ಲಿ ಪಾಸಿಟಿವ್ ಬಂದ ಹಿನ್ನೆಲೆ ಹಾಸನದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ‌.

ತಾಲೂಕುವಾರು ಪ್ರಕರಣಗಳು

1. ಆಲೂರು - 15

2. ಬೇಲೂರು - 7

3. ಅರಕಲಗೂಡು - 15

4. ಅರಸೀಕೆರೆ - 4

5. ಹಾಸನ - 23

6. ಹೊಳೆನರಸೀಪುರ - 26

7. ಚನ್ನರಾಯಪಟ್ಟಣ - 162

8. ಸಕಲೇಶಪುರ - 0

Last Updated : Jun 17, 2020, 9:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.