ETV Bharat / state

ಸ್ವಗ್ರಾಮದಲ್ಲಿ ಪತ್ನಿಯೊಂದಿಗೆ ಮತ ಚಲಾಯಿಸಿದ ಮಾಜಿ ಸಚಿವ ಎ.ಮಂಜು

author img

By

Published : Dec 22, 2020, 4:32 PM IST

ಜೆಡಿಎಸ್ ಪಕ್ಷದ ಉಳಿವಿಗಾಗಿ ಅವರು ಯಾರ ಜೊತೆ ಬೇಕಾದರೂ ಹೋಗುತ್ತಾರೆ. ನಮಗೆ ಮೆಜಾರಿಟಿ ಇರುವುದರಿಂದ ಯಾರ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಎ.ಮಂಜು ಹೇಳಿದರು.

Former minister A. Manju voted with his wife
ಮಾಜಿ ಸಚಿವ ಎ.ಮಂಜು

ಹಾಸನ: ಇಂದು ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಎ.ಮಂಜು ಸ್ವಗ್ರಾಮ ಹನ್ಯಾಳುವಿನಲ್ಲಿ ಪತ್ನಿ ತಾರಾ ಜೊತೆ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

ಮತ ಚಲಾಯಿಸಿದ ಮಾಜಿ ಸಚಿವ ಎ.ಮಂಜು

ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ ಪಕ್ಷದ ಉಳಿವಿಗಾಗಿ ಅವರು ಯಾರ ಜೊತೆ ಬೇಕಾದರೂ ಹೋಗುತ್ತಾರೆ. ನಮಗೆ ಮೆಜಾರಿಟಿ ಇರುವುದರಿಂದ ಯಾರ ಅವಶ್ಯಕತೆ ಇಲ್ಲ ಎಂದರು.

ಓದಿ: ಪತ್ನಿಯೊಂದಿಗೆ ತೆರಳಿ ಮತ ಚಲಾಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬಿಜೆಪಿ ಜೊತೆ ಜೆಡಿಎಸ್ ವಿಲೀನದ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಇದರ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಜೆಡಿಎಸ್ ನಿಲುವನ್ನು ಜನರೇ ತೀರ್ಮಾನ ಮಾಡ್ತಾರೆ. ವೈಯಕ್ತಿಕ ಲಾಭಕ್ಕಾಗಿ ಪಕ್ಷಗಳ ಜೊತೆ ಹೋಗೋದು ಮಾಮೂಲಿಯಾಗಿದ್ದು, ಇದರಿಂದ ಬಿಜೆಪಿಗೆ ಅನುಕೂಲವಿಲ್ಲ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.