ಹಾಸನ: ಅಕ್ರಮ ಗಣಿಗಾರಿಕೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ನಾನು ಬೇಡ ಎನ್ನುವುದಿಲ್ಲ. ಆದರೆ ನಮ್ಮ ಕುಟುಂಬವನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸಂಸದೆ ಸುಮಲತಾ ವಿರುದ್ಧ ಗುಡುಗಿದರು.
ನಗರದ ಪ್ರವಾಸಿಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಕುಟುಂಬದಲ್ಲಿ ದೇವೇಗೌಡ್ರು ಇರುವ ತನಕ ಒಡಕು ತಂದಿಡಲು ಸಾಧ್ಯವಿಲ್ಲ. ಕುಮಾರಸ್ವಾಮಿ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಯಾರೇ ಗಣಿಗಾರಿಕೆ ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಿ, ಆದರೆ ಗಣಿಗಾರಿಕೆಗೂ ನಮ್ಮ ಕುಟುಂಬಕ್ಕೂ ಏನು ಸಂಬಂಧ?. ನಮ್ಮ ಕುಟುಂಬ ಒಡೆಯುವ ಕೆಲಸ ಯಾಕೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ನೀಡಿರುವ ಕೊಡುಗೆ ಎಲ್ಲರಿಗೂ ಗೊತ್ತಿದೆ. ಒಬ್ಬ ಮುಖ್ಯಮಂತ್ರಿಯಾಗಿ ಅಂಬರೀಶ್ ಸಾವಿನ ಸಂದರ್ಭದಲ್ಲಿ ಯಾವ ರೀತಿ ಕೆಲಸ ಮಾಡಿದರು ಎಂಬುದನ್ನು ನಾನು ಹೇಳಬೇಕಿಲ್ಲ. ಅದನ್ನು ಅರ್ಥಮಾಡಿಕೊಂಡರೆ ಅವರ ವಿರುದ್ಧ ಸುಮಲತಾ ಆರೋಪ ಮಾಡುವುದು ಎಷ್ಟು ಸರಿ?. ಪ್ರತಿಯೊಂದು ಕೆಲಸಕ್ಕೂ ಪಟ್ಟಿ ಮಾಡಿ ಹೇಳುತ್ತೇನೆ. ಕೇವಲ ಒಂದೇ ಒಂದು ಪಕ್ಷದಿಂದ ರಾಜಕೀಯ ಉಳಿಯುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸುಮಲತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣರನ್ನು ನೋಡಿ ಕುಮಾರಸ್ವಾಮಿ ಕಲಿಯುವುದು ಬಹಳಷ್ಟಿದೆ: ಸುಮಲತಾ