ETV Bharat / state

ಕೊರೊನಾ ತಡೆಯಲು ಜಿಲ್ಲಾಡಳಿತ, ಆರೋಗ್ಯ ಇಲಾಖೆಯೊಂದಿಗೆ ಜನರು ಸಹಕರಿಸಿ: ಹೆಚ್.ಡಿ. ರೇವಣ್ಣ ಮನವಿ - ಸಾರ್ವಜನಿಕರಿಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ

ಕೊರೊನಾ ಹರಡದಂತೆ ತಡೆಯಲು ಈಗಾಗಲೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಜನರು ಇದಕ್ಕೆ ಸಹಕಾರ ನೀಡುವ ಮೂಲಕ ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡುವುದನ್ನು ನಿಲ್ಲಿಸಬೇಕಿದೆ ಎಂದು ಸಾರ್ವಜನಿಕರಿಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಮನವಿ ಮಾಡಿದ್ದಾರೆ.

Former Minister HD Rewanna appeals to the public
ಹೆಚ್.ಡಿ. ರೇವಣ್ಣ
author img

By

Published : Mar 27, 2020, 10:44 PM IST

ಹಾಸನ : ಕೊರನಾ ವೈರಸ್ ಹರಡದಂತೆ ತಡೆಗಟ್ಟಲು ಎಲ್ಲರ ಸಹಕಾರ ಅತ್ಯಗತ್ಯ. ಅನಗತ್ಯವಾಗಿ ರಸ್ತೆಗಳಲ್ಲಿ ಒಡಾಡದೆ ಮನೆಗೆ ಬೇಕಾದ ಪದಾರ್ಥಗಳನ್ನು ಕೊಂಡುಕೊಳ್ಳಲು ನಿಗದಿತ ಸಮಯದಲ್ಲಿ ಹೊರ ಬರುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹೊಳೆನರಸೀಪುರದಲ್ಲಿ ತಹಶೀಲ್ದಾರ್ ಹಾಗೂ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಬೇಕು ಹಾಗೂ ತಾಲೂಕು ಮಟ್ಟದಲ್ಲಿ ಹೆಚ್ಚುವರಿ ಐಸೋಲೇಶನ್ ವಾರ್ಡ್‌ಗಳನ್ನು ತೆರೆಯಬೇಕಾಗಿದೆ ಎಂದರು.

ಮಾಜಿ ಸಚಿವ ಹೆಚ್​.ಡಿ.ರೇವಣ್ಣ
ಈಗಾಗಲೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಜನರು ಇದಕ್ಕೆ ಸಹಕಾರ ನೀಡುವ ಮೂಲಕ ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡುವುದನ್ನು ನಿಲ್ಲಿಸಬೇಕಿದೆ. ಬಡವರು, ಕೂಲಿ ಕಾರ್ಮಿಕರು ಕೆಲಸವಿಲ್ಲದೇ ಕಷ್ಟದಲ್ಲಿದ್ದಾರೆ ಅವರ ನೆರವಿಗೆ ನಾವು ಧಾವಿಸಬೇಕಿದೆ ಎಂದು ಹೇಳಿದರು. ಹೊಳೆನರಸೀಪುರ ತಾಲೂಕಿನಲ್ಲಿ ಸಂಘ ಸಂಸ್ಥೆಗಳೊಟ್ಟಿಗೆ ಚರ್ಚಿಸಿ, ಅವರಿಗೆ ಆರ್ಥಿಕ ನೆರವು ನೀಡಲು ಶ್ರಮ ವಹಿಸಲಾಗುವುದು. ಬೇಸಿಗೆ ಕಾಲ ಹತ್ತಿರವಾಗಿದೆ, ಕೆರೆ ಕಟ್ಟೆಗಳಲ್ಲಿ ಕೊಳಚೆ ನೀರು ಶೇಖರಣೆಯಾಗುತ್ತಿದ್ದು, ಹೇಮಾವತಿ ಡ್ಯಾಂನಲ್ಲಿ ಸಾಕಷ್ಟು ನೀರಿದೆ. ಅದನ್ನ ಬೇರೆ ಕಡೆಗೆ ಹರಿದು ಹೋಗಲು ಬಿಡಬಾರದು. ಕೂಡಲೇ ತಾಲೂಕಿನ ಕೆರೆ ಕಟ್ಟೆಗಳನ್ನು ತುಂಬಿಸುವ ಕೆಲಸ ಮಾಡಬೇಕು. ಮುಖ್ಯಮಂತ್ರಿಗಳೊಟ್ಟಿಗೆ ಚರ್ಚಿಸಿದ್ದೇನೆ. ಜಿಲ್ಲಾಧಿಕಾರಿ ಬಳಿಯೂ ಮನವಿ ಮಾಡಿದ್ದೇನೆ. ಒಂದು ವೇಳೆ ಹೊರಗೆ ನೀರು ಹರಿಸದರೇ ಹೇಮಾವತಿ ಅಣೆಕಟ್ಟು ಬಳಿಗೆ ಹೋಗಿ ಕೂರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.