ಹಾಸನ: ನಗರದ ಹೊರವಲಯದ ರಿಂಗ್ ರಸ್ತೆಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿ ಆರೋಪಿಗಳನ್ನು ಬಡಾವಣೆ ಪೊಲೀಸರು ಬಂಧಿಸಿದ್ದಾರೆ.
ಮನು, ಅಭಿಷೇಕ್, ಗೌತಮ್ ಮತ್ತು ಕುಮಾರ್ ಬಂಧಿತ ಆರೋಪಿಗಳು. ರಿಂಗ್ ರಸ್ತೆಯ ಉಲ್ಲಾಸ್ ಬಾರ್ನಲ್ಲಿ ಬಿಯರ್ ಬಾಟಲ್ ಎಸೆದ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಪುನೀತ್ (27) ಎಂಬ ಯುವಕನನ್ನು ಕೊಲೆ ಮಾಡಿ ಪರಾರಿ ಆಗಿದ್ದರು. ತನಿಖೆ ಮುಂದುವರಿಸಿದ ಹಾಸನದ ಬಡಾವಣೆ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿ ಕೆಲವು ಮಾಹಿತಿಗಳನ್ನು ಆಧರಿಸಿ 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಇಂದು ಬಂಧನಕ್ಕೊಳಗಾಗಿರುವ 4 ಮಂದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಿದ್ದಾರೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.