ಚನ್ನರಾಯಪಟ್ಟಣ(ಹಾಸನ) : ಬೆಳಗಿನಜಾವ ರಾಷ್ಟ್ರೀಯ ಹೆದ್ದಾರಿ 75 ಮುಖ್ಯರಸ್ತೆಯಲ್ಲಿ ಕಾರು ಹಾಗೂ ಕ್ಯಾಂಟರ್ಗೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
ಚನ್ನರಾಯಪಟ್ಟಣದ ಬೈಪಾಸ್ ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ವಾಹನಗಳನ್ನು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ. ಮೃತಪಟ್ಟ ವ್ಯಕ್ತಿಗಳು ಯಾರು ಎನ್ನುವ ಬಗ್ಗೆ ಸರಿಯಾದ ಮಾಹಿತಿ ದೊರಕಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.