ಹಾಸನ: ಕಳೆದ ಎರಡು ದಿವಸಗಳ ಹಿಂದೆ ಸಂಜೆ 5 ಗಂಟೆಯ ಸಮಯದಲ್ಲಿ ರಿಂಗ್ ರಸ್ತೆಯಲ್ಲಿರುವ ಬಾರ್ ವೊಂದರಲ್ಲಿ ಎರಡು ಗುಂಪುಗಳ ನಡುವೆ ಕುಡಿದ ಅಮಲಿನಲ್ಲಿ ಘರ್ಷಣೆ ನಡೆದಿದ್ದು, ಇವರಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದ. ಈ ಸಂಬಂಧ ಆರು ಜನ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ಪ್ರಕರಣದ ಉಳಿದ ಆರೋಪಿಗಳನ್ನು ಕೂಡ ಶೀಘ್ರದಲ್ಲಿ ಬಂಧಿಸಲಾಗುವುದು. ಈ ಕೃತ್ಯಕ್ಕೆ ಹಳೆಯ ದ್ವೇಷ, ಭಿನ್ನಾಭಿಪ್ರಾಯ ಕಾರಣವಲ್ಲ. ಎರಡೂ ತಂಡಗಳು ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.