ETV Bharat / state

ಕೊರೊನಾ ಆತಂಕದ ನಡುವೆಯೂ ಗಾಂಜಾ ಸೇವನೆ, ಮಾರಾಟಕ್ಕೆ ಯತ್ನ: ನಾಲ್ವರ ಬಂಧನ - ಹಾಸನ ಗಾಂಜಾ ಸುದ್ದಿ

ಗಾಂಜಾ ಸೇವನೆ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಯುವಕರನ್ನು ಪಟ್ಟಣ ಠಾಣೆ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ganja Accused  Arressted in hassan
ನಾಲ್ವರ ಬಂಧನ
author img

By

Published : Mar 27, 2020, 6:34 PM IST

ಹಾಸನ: ಗಾಂಜಾ ಸೇವನೆ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಯುವಕರನ್ನು ನಗರದ ಸಕಲೇಶಪುರ ಪಟ್ಟಣ ಠಾಣೆ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಪಟ್ಟಣದ ಬಿ.ಎಂ ರಸ್ತೆಗೆ ಹೊಂದಿಕೊಂಡಂತೆ ಇರುವ ಖಾಸಗಿ ಕಲ್ಯಾಣ ಮಂಟಪದ ಸಮೀಪ ಖಚಿತ ಮಾಹಿತಿ ಮೇರೆಗೆ ಗಾಂಜಾ ಸೇವನೆ ಹಾಗೂ ಮಾರಾಟ ಮಾಡಲು ಯತ್ನಿಸುತ್ತಿದ್ದ ಲಹಿ ಖಾನ್ (24), ಸುಜಿತ್ (22), ಸಂದೇಶ್ (22), ಪುನೀತ್ (21) ಎಂಬ ಯುವಕರನ್ನು ಖಚಿತ ಮಾಹಿತಿಯ ಮೇರೆಗೆ ಬಂಧಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಡಿವೈಎಸ್​ಪಿ ಗೋಪಿ, ಆರಕ್ಷಕ ವೃತ್ತ ನಿರೀಕ್ಷಕ ಗಿರೀಶ್, ನಗರ ಠಾಣೆ ಪಿಎಸ್‌ಐ ರಾಘವೇಂದ್ರ, ಪೊಲೀಸ್ ಸಿಬ್ಬಂದಿ ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.