ಆಲೂರು (ಹಾಸನ): ಚಾಲಕನ ಅಜಾಗರೂಕತೆಯಿಂದ ಗ್ಯಾಸ್ ಟ್ಯಾಂಕರ್ವೊಂದು ಪಲ್ಟಿಯಾಗಿದ್ದು ಜರುಗಬೇಕಿದ್ದ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿರುವ ಘಟನೆ ಹಾಸನದ ಆಲೂರಿನಲ್ಲಿ ನಡೆದಿದೆ.
ತಾಲೂಕಿನ ಭರತವಳ್ಳಿ ಗ್ರಾಮದ ಕೆರೆ ಸಮೀಪದ ತಿರುವಿನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅತಿ ವೇಗದ ಚಾಲನೆಯೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಲೀಕ್ ಆಗದಂತೆ ತಡೆದು ದೊಡ್ಡ ಮಟ್ಟದ ಅನಾಹುತ ತಪ್ಪಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಆರ್. ಶ್ರೀನಿವಾಸಗೌಡ ಹಾಗೂ ಆಲೂರು ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.