ETV Bharat / state

ಉಚಿತ ಲ್ಯಾಪ್​ಟಾಪ್ ಗೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ - students protest

ಉಚಿತ ಲ್ಯಾಪ್​​ಟಾಪ್​ ನೀಡುವಂತೆ ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್​ಎಸ್​​ಯುಐ) ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Graduate students protest demanding free laptops
ಉಚಿತ ಲ್ಯಾಪ್​ಟಾಪ್​ ನೀಡುವಂತೆ ಒತ್ತಾಯಿಸಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ
author img

By

Published : Jan 20, 2020, 8:09 PM IST

ಹಾಸನ: ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​​ಟಾಪ್​ ನೀಡುವಂತೆ ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್​ಎಸ್​​ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು.

ಉಚಿತ ಲ್ಯಾಪ್​ಟಾಪ್​ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಕಲಾ ಕಾಲೇಜಿನ 2019-20ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್ ನೀಡುತ್ತಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ದ್ವಿತೀಯ ಮತ್ತು ಅಂತಿಮ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ, ಬಿಬಿಎಂ ವಿದ್ಯಾರ್ಥಿಗಳಿಗೆ ಈ ಯೋಜನೆಯ ಫಲ ಸಿಗದಿರುವುದು ವಿಷಾದನೀಯ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿಕೊಂಡು ಎರಡು-ಮೂರು ತಿಂಗಳಲ್ಲಿ ಉನ್ನತ ಶಿಕ್ಷಣಕ್ಕೆ ಹೋಗುತ್ತಾರೆ. ಅವರಿಗೆ ಲ್ಯಾಪ್​ಟಾಪ್ ನೀಡಿದರೆ ಮುಂದಿನ ವ್ಯಾಸಂಗಕ್ಕೆ ಅನುಕೂಲವಾಗುತ್ತದೆ. ಯಾವೊಬ್ಬ ವಿದ್ಯಾರ್ಥಿಗೂ ತಾರತಮ್ಯ ಮಾಡಬಾರದು ಎಂದು ಮನವಿ ಮಾಡಿದರು.

Intro:ಹಾಸನ: ಪದವಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಮೂರು ವರ್ಷ ವ್ಯಾಸಂಗದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ನೀಡುವಂತೆ ಒತ್ತಾಯಿಸಿ ಎನ್.ಎಸ್.ಯು.ಐ. ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಆರ್. ಗಿರೀಶ್ ರವರಿಗೆ ಮನವಿ ಸಲ್ಲಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಬಂದ ಅವರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರಕಾರಿ ಕಲಾ ಕಾಲೇಜಿನ ೨೦೧೯-೨೦ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ನೀಡುತ್ತಿರುವುದನ್ನು ಸ್ವಾಗತಿಸುತ್ತೇವೆ. ಆದರೇ ದ್ವಿತೀಯ ಮತ್ತು ಅಂತಿಮ ವರ್ಷದ ಬಿ.ಎ, ಬಿಕಾಂ, ಬಿಎಸ್ಸಿ, ಬಿಸಿಎ, ಬಿಬಿಎಂ ವಿದ್ಯಾರ್ಥಿಗಳಿಗೆ ಈ ಯೋಜನೆಯ ಫಲ ಸಿಗದೇ ಇರುವುದು ವಿಷಾಧನೀಯವಾಗಿದೆ ಎಂದರು.
ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿಕೊಂಡು ಇನ್ನು ಕೇವಲ ಎರಡು ಮೂರು ತಿಂಗಳಲ್ಲಿ ಹೊರ ಹೋಗುತ್ತಾರೆ. ಅವರಿಗೆ ಉಚಿತ ಲ್ಯಾಪ್ ಟ್ಯಾಪ್ ನೀಡುವುದರಿಂದ ಅವರ ಉನ್ನತ ವ್ಯಾಸಾಂಗ ನಡೆಸಲು ಅನುಕೂಲವಾಗುತ್ತದೆ. ಸರಕಾರದ ಉಚಿತ ಲ್ಯಾಪ್ ಟ್ಯಾಪ್ ನೀಡುವ ಯೋಜನೆ ಮೂರು ವರ್ಷದ ವಿದ್ಯಾರ್ಥಿಗಳಿಗೂ ಒಳಪಡಬೇಕು ಎಂದು ಆಗ್ರಹಿಸಿದ ಅವರು ಇಲ್ಲವಾದರೇ ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡಿದಂತಾಗುತ್ತದೆ ಕೂಡಲೇ ಬಗೆಹರಿಸುವಂತೆ ಎಂದು ತಮ್ಮ ಬೇಡಿಕೆಗಳನ್ನು ಜಿಲ್ಲಾಡಳಿತದ ಮುಂದೆ ಇಟ್ಟರು.

ಬೈಟ್ : ರಂಜಿತ್ ಗೊರೂರು, ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.