ಹಾಸನ: ಹಾಸನ ಶಾಸಕ ಪ್ರೀತಂಗೌಡಗೆ ಕೊರೊನಾ ದೃಢಪಟ್ಟಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಶಾಸಕ, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಯಾವುದೇ ರೋಗಲಕ್ಷಣಗಳಿಲ್ಲದಿದ್ದರೂ, ವೈದ್ಯರ ಸಲಹೆಯಂತೆ ಐಸೋಲೇಷನ್ಗೆ ಒಳಗಾಗಿದ್ದೇನೆ ಎಂದಿದ್ದಾರೆ.
ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿ, ತಾಯಿ ಹಾಸನಾಂಬೆಯ ಆಶೀರ್ವಾದ ಮತ್ತು ನಿಮ್ಮೆಲ್ಲ ಹಾರೈಕೆಗಳಿಂದ ಬೇಗ ಗುಣಮುಖನಾಗುತ್ತೇನೆಂದು ಟ್ವೀಟ್ ಮಾಡಿದ್ದಾರೆ.
ಮಸ್ಕಿ ಉಪ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಪ್ರೀತಂಗೌಡ ಪ್ರಚಾರದಿಂದ ಬಂದೊಡನೆ ಪರೀಕ್ಷೆಗೆ ಒಳಗಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ಕೊರೊನಾ ದೃಢವಾಗಿದೆ.