ETV Bharat / state

ಇಂದಿನಿಂದ ಪ್ರಸಿದ್ಧ ಹಾಸನಾಂಬೆ ದೇಗುಲ ಓಪನ್​... ಕೋವಿಡ್​ ಲಸಿಕೆ ಪಡೆದವರಿಗೆ ಮಾತ್ರ ದರ್ಶನ ಭಾಗ್ಯ - ಹಾಸನಾಂಬ ದೇವಾಲಯ ಓಪನ್​

ವರ್ಷಕ್ಕೊಮ್ಮೆ ದರ್ಶನ ನೀಡುವ ವಿಶ್ವಪ್ರಸಿದ್ಧ ಹಾಸನಾಂಬೆ ದೇವಾಲಯ ಇಂದಿನಿಂದ ತೆರೆದುಕೊಳ್ಳಲಿದ್ದು, ನಾಳೆಯಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Hasanamba Temple
Hasanamba Temple
author img

By

Published : Oct 28, 2021, 4:06 AM IST

ಹಾಸನ: ವಿಶ್ವಪ್ರಸಿದ್ದ ಹಾಸನದ ಹಾಸನಾಂಬೆ ದೇವಾಲಯ ಇಂದಿನಿಂದ ತೆರೆಯಲಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಅಕ್ಟೋಬರ್​ 29ರಿಂದ ನವೆಂಬರ್​​ 5ರವರೆಗೆ ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8ರವರೆಗೆ ಹಾಸನಾಂಬೆ ದರ್ಶನ ಪಡೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಪ್ರತಿದಿನ ಮಧ್ಯಾಹ್ನ 1ರಿಂದ 3ರವರಗೆ ನೈವೇದ್ಯಕ್ಕೆ ಅವಕಾಶವಿದೆ.

ಇದನ್ನೂ ಓದಿರಿ: ಶಿಲ್ಪಾ ಶೆಟ್ಟಿ ದಂಪತಿಯಿಂದ ಮಾನಸಿಕ ಕಿರುಕುಳ... 75 ಕೋಟಿ ರೂ. ಪರಿಹಾರ ಕೇಳಿದ ಶೆರ್ಲಿನ್​

ದೇವಿಯ ದರ್ಶನ ಪಡೆದುಕೊಳ್ಳಲು ಇಲ್ಲಿಗೆ ಆಗಮಿಸುವ ಭಕ್ತರು ಕೋವಿಡ್​ನ ಎರಡು ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯವಾಗಿದ್ದು, ಪ್ರಮಾಣಪತ್ರ ತೋರಿಸುವುದು ಅನಿವಾರ್ಯವಾಗಿದೆ. ಇದರ ಜೊತೆಗೆ ಆಧಾರ್​ ಅಥವಾ ವೋಟರ್ ಐಡಿ ತೆಗೆದುಕೊಂಡು ಬರುವಂತೆ ಸೂಚನೆ ನೀಡಲಾಗಿದೆ . ದೇವಾಲಯಕ್ಕೆ ಬರುವ ಭಕ್ತರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದ್ದು, ವ್ಯಾಕ್ಸಿನ್​​ ಪಡೆಯದೇ ಬರುವ ಭಕ್ತರಿಗೆ ಅವಕಾಶ ನೀಡುವುದಿಲ್ಲ ಎಂದು ಈಗಾಗಲೇ ಸಚಿವರು ಮಾಹಿತಿ ನೀಡಿದ್ದಾರೆ.

ವಿಶೇಷ ದರ್ಶನಕ್ಕೆ 300 ಮತ್ತು 1000 ರೂ: ಹಾಸನಾಂಬೆಯ ದರ್ಶನಕ್ಕೆ 300 ಹಾಗೂ 1000 ಮುಖಬೆಲೆಯ ಟಿಕೆಟ್ ನಿಗದಿ ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಜಾತ್ರೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಹಾಸನಾಂಬೆ ದರ್ಶನಕ್ಕೆ ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.