ETV Bharat / state

ಹಾಸನ: 259 ಕೋವಿಡ್‌ ಪ್ರಕರಣಗಳು ಪತ್ತೆ: ನಾಲ್ವರು ಸೋಂಕಿಗೆ ಬಲಿ

ಹಾಸನ ಜಿಲ್ಲೆಯಲ್ಲಿ ಇಂದು 296 ಸೋಂಕಿತರು ಗುಣಮುಖರಾಗಿದ್ದು, 259 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 13742 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್
author img

By

Published : Sep 21, 2020, 8:35 PM IST

Updated : Sep 21, 2020, 9:43 PM IST

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 259 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 13742ಕ್ಕೆ ಏರಿಕೆಯಾಗಿದೆ. ನಾಲ್ವರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 269ಕ್ಕೆ ತಲುಪಿದೆ ಎಂದು ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಇಂದು ಬಿಡುಗಡೆಯಾದ 296 ಜನರು ಸೇರಿ ಈವರೆಗೆ 10823 ಮಂದಿ ಗುಣಮುಖರಾಗಿದ್ದಾರೆ. 2650 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 53 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಇಂದು ದಾಖಲಾಗಿರುವ ಕೊರೊನಾ ಪ್ರಕರಣಗಳಲ್ಲಿ ಆಲೂರು-16, ಅರಕಲಗೂಡು-18, ಅರಸೀಕೆರೆ-25, ಬೇಲೂರು-14, ಚನ್ನರಾಯಪಟ್ಟಣ-76, ಹಾಸನ-66, ಹೊಳೆನರಸೀಪುರ-31, ಸಕಲೇಶಪುರ-11, ಇತರೆ- 2 ಒಟ್ಟು 259 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲಾರು ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:

1. ಆಲೂರು - 487

2. ಅರಕಲಗೂಡು- 1284

3. ಅರಸೀಕೆರೆ - 1751

4. ಬೆಲೂರು - 990

5. ಚನ್ನರಾಯಪಟ್ಟಣ- 1833

6. ಹಾಸನ- 5804

7. ಹೊಳೆನರಸೀಪುರ- 1033

8. ಸಕಲೇಶಪುರ -478

9. ಇತರೆ 82 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 13742 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

Last Updated : Sep 21, 2020, 9:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.