ಹಾಸನ : ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಆರೋಪಿ, ರೌಡಿಶೀಟರ್ ಸುಧಾಕರನನ್ನು ಪೊಲೀಸರು ಬಲೆಗೆ ಕೆಡವಿದ್ದಾರೆ.
ನಾಗಲಪುರ ಕಾಲೇಜಿನಲ್ಲಿ ಎರಡನೇ ವರ್ಷದ ಐಟಿಐ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಕಳೆದ ಒಂದೂವರೆ ತಿಂಗಳ ಹಿಂದೆ ಮಾವಿನಕೆರೆ ಬೆಟ್ಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಧಾಕರನನ್ನು ಬಂಧಿಸಲು ಬಿದರಕ್ಕ ಗ್ರಾಮಕ್ಕೆ ಪಿಎಸ್ಐ ಕುಮಾರ್ ಮತ್ತು ಸಿಬ್ಬಂದಿ ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಸದ್ಯ ಡಿವೈಎಸ್ ಪಿ ಕೈಷ್ಣೇಗೌಡ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.