ಅರಕಲಗೂಡು(ಹಾಸನ): ಕೋವಿಡ್-19 ತಡೆಯುವಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಸ್ಮರಣೀಯವಾಗಿದೆ ಎಂದು ಮಾಜಿ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಹೊನ್ನವಳ್ಳಿ ಸತೀಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸಹಕಾರ ಬ್ಯಾಂಕ್ ವತಿಯಿಂದ ಕೊರೊನಾ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂಪಾಯಿಗಳ ಚೆಕ್ ವಿತರಣೆ ಮಾಡಿ ಮಾತನಾಡಿದ ಹೊನ್ನವಳ್ಳಿ ಸತೀಶ್ ಅವರು, ದೇಶದಲ್ಲಿ ಕೊರೊನಾ ವೈರಸ್ ಹರಡುವಿಕೆ ತಡೆಯುವಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಗಣನೀಯವಾಗಿದ್ದಾಗಿದೆ ಎಂದರು.
ಈ ವೇಳೆ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ನಂಜುಂಡ ಸ್ವಾಮಿ, ಆಶಾ ಕಾರ್ಯಕರ್ತೆಯರಿಗೆ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪೌಷ್ಠಿಕಾಂಶಯುತ ಪಾನೀಯ ಮತ್ತು ಮಾಸ್ಕ್ ವಿತರಿಸಿದರು. ಆನಂತರ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಇಲಾಖೆಯ ಸೇವೆ ಶ್ಲಾಘಿಸಿದರು.