ETV Bharat / state

ಸಂಚಾರ ನಿಯಮ ಉಲ್ಲಂಘಿಸಿ ಓವರ್​ ಟೇಕ್​... ಬಸ್​ ಚಕ್ರಕ್ಕೆ ಸಿಲುಕಿ ಇಬ್ಬರು ಯುವಕರ ಸಾವು

author img

By

Published : Dec 16, 2019, 4:59 PM IST

ಸಂಚಾರಿ ನಿಯಮವನ್ನು ಉಲ್ಲಂಘಿಸಿ, ಹೆಲ್ಮೆಟ್ ಕೂಡ ಧರಿಸದೆ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಮುಂಭಾಗದ ಚಕ್ರಕ್ಕೆ ಸಿಲುಕಿ ಯುವಕರಿಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

hassan bike bus accident
ಬೇಲೂರು ಬೈಕ್ ಬಸ್ ಅಪಘಾತ

ಹಾಸನ: ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಮದಘಟ್ಟ ಗ್ರಾಮದ ಅಭಿ (21), ಚಂದನ್ (22) ಮೃತ ಯುವಕರು. ಸಂಚಾರ ನಿಯಮವನ್ನು ಉಲ್ಲಂಘಿಸಿ, ಹೆಲ್ಮೆಟ್ ಕೂಡ ಧರಿಸದೆ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಮುಂಭಾಗದ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಬೇಲೂರು ಪೊಲೀಸರು ಆಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಅಭಿ (21) ಚಂದನ್ (22) ಮೃತ ಯುವಕರಾಗಿದ್ದು, ಯುವಕರುಗಳ ನಿರ್ಲಕ್ಷವೇ ಪ್ರಾಣಕ್ಕೆ ಸಂಚಕಾರ ಎಂಬುದು ಸ್ಥಳೀಯರ ಆರೋಪವಾಗಿದೆ.

ಸಂಚಾರಿ ರಸ್ತೆ ನಿಯಮವನ್ನು ಉಲ್ಲಂಘಿಸಿ ಹೆಲ್ಮೆಟ್ ಕೂಡ ಧರಿಸದೆ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬಂದ ಬಸ್ಸಿನ ಮುಂಭಾಗದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೇಲೂರು ತಾಲೂಕು ಬೊಮ್ಮಡಿಹಳ್ಳಿ ಬಳಿ ರಸ್ತೆ ಇಂತಹದೊಂದು ಭೀಕರ ರಸ್ತೆ ಅಪಘಾತ ವಾಗಿದ್ದು ಬೇಲೂರು ತಾಲೂಕಿನ ಮದಘಟ್ಟ ಗ್ರಾಮದ ಯುವಕರುಗಳು ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಬೇಲೂರು ಪೊಲೀಸರು ಆಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣದ ಸಂಬಂಧ ಬೇಲೂರು ಠಾಣೆಯಲ್ಲಿ ದೂರು ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.