ETV Bharat / state

ಹಾಸನ; ಇಂದು 143 ಕೊರೊನಾ ಕೇಸ್​ ಪತ್ತೆ.. ಒಂದೇ ದಿನ 140 ಜನ ಗುಣಮುಖ

ಹಾಸನ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಹೊಸದಾಗಿ 143 ಜನರಲ್ಲಿ ಸೋಂಕು ಪತ್ತೆಯಾಗಿದೆ ಹಾಗೂ ಇಂದು ಸುಮಾರು 140 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ.

hassan corona new cases updates
ಒಂದೇ ದಿನ 140 ಜನ ಗುಣಮುಖ
author img

By

Published : Aug 21, 2020, 9:03 PM IST

ಹಾಸನ: ಇಂದು ಜಿಲ್ಲೆಯಲ್ಲಿ‌ 143 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಒಂದೇ ದಿನ 140 ಜನ ಗುಣಮುಖ
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಶುಕ್ರವಾರ ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-10, ಅರಕಲಗೂಡು-10, ಅರಸೀಕೆರೆ-23, ಬೇಲೂರು-15, ಚನ್ನರಾಯಪಟ್ಟಣ-41, ಹಾಸನ-41, ಹೊಳೆನರಸೀಪುರ-2, ಸಕಲೇಶಪುರ-0, ಇತರೆ- 1 ಒಟ್ಟು 143 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5563 ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ರು.
ಇಂದು 140 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಇದುವರೆಗೆ 3575 ಮಂದಿ ಬಿಡುಗಡೆಯಾಗಿದ್ದಾರೆ. 1833 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 155 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದರು. ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 154
2. ಅರಕಲಗೂಡು -469
3. ಅರಸೀಕೆರೆ- 833
4. ಬೆಲೂರು- 394
5. ಚನ್ನರಾಯಪಟ್ಟಣ- 793
7. ಹಾಸನ -2206
8. ಹೊಳೆನರಸೀಪುರದಲ್ಲಿ -525
9. ಸಕಲೇಶಪುರ- 151
10. ಇತರೆ -38 ಪ್ರಕರಣಗಳು ಈವರೆಗೆ ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.