ETV Bharat / state

ಹಾಸನ: ಇಂದು 309 ಹೊಸ ಕೋವಿಡ್​ ಪ್ರಕರಣ ಪತ್ತೆ

ಹಾಸನ ಜಿಲ್ಲೆಯಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ 14, 268 ಕ್ಕೆ ಏರಿಕೆಯಾಗಿದೆ. ಪ್ರಸ್ತುತ, 2,389 ಸಕ್ರಿಯ ಪ್ರಕರಣಗಳಿದ್ದು, ಇಂದು ಹೊಸದಾಗಿ 309 ಪ್ರಕರಣಗಳು ವರದಿಯಾಗಿವೆ.

author img

By

Published : Sep 23, 2020, 5:56 PM IST

Hassan Covid Count Update
ಹಾಸನದಲ್ಲಿ ಕೋವಿಡ್​ ಪ್ರಕರಣ ಹೆಚ್ಚಳ

ಹಾಸನ : ಜಿಲ್ಲೆಯಲ್ಲಿ ಇಂದು ಹೊಸದಾಗಿ 309 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 14,268 ಕ್ಕೆ ಏರಿಕೆಯಾಗಿದೆ. ಇಂದು 3 ಜನರ ಸಾವಿನೊಂದಿಗೆ ಮೃತರ ಸಂಖ್ಯೆ 276 ತಲುಪಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾದ 465 ಜನ ಸೇರಿ ಈವರೆಗೆ 11,603 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 2,389 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಇಂದು ಆಲೂರು 8, ಅರಕಲಗೂಡು 34, ಅರಸೀಕೆರೆ 27, ಬೇಲೂರು 21, ಚನ್ನರಾಯಪಟ್ಟಣ 41, ಹಾಸನ 134, ಹೊಳೆನರಸೀಪುರ 32, ಸಕಲೇಶಪುರ ತಾಲೂಕಿಲ್ಲಿ 11 ಮತ್ತು ಇತರ 1 ಸೇರಿ ಒಟ್ಟು 309 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಕೊರೋನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡಿ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ತಾಲೂಕುವಾರು ಕೋವಿಡ್ ಪ್ರಕರಣಗಳು :
1. ಆಲೂರು - 497
2. ಅರಕಲಗೂಡು - 1,332
3. ಅರಸೀಕೆರೆ -1,798
4. ಬೆಲೂರು - 1,031
5. ಚನ್ನರಾಯಪಟ್ಟಣ -1,938
7. ಹಾಸನ - 6,001
8. ಹೊಳೆನರಸೀಪುರ -1,076
9. ಸಕಲೇಶಪುರ- 512
10. ಇತರ 83 ಪ್ರಕರಣಗಳು ಈವರೆಗೆ ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.